ಕರ್ನಾಟಕ: ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಸಂಸ್ಥಗಳಲ್ಲಿ ಖಾಲಿ ಇರುವ ಹುದ್ದೆಗಳ (ದ್ವಿತೀಯ ದರ್ಜೆ ಸಹಾಯಕ, ಕಿರಿಯ ಸಹಾಯಕರು ಮುಂತಾದ ಸಮನಾದ ಹುದ್ದೆಗಳಿಗೆ) ನೇಮಕಾತಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತಿಭಂಗ ಆಗದಂತೆ ಪರೀಕ್ಷಾ ಕೇಂದ್ರದ ಸುತ್ತಮುತ್ತಲಲ್ಲಿ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅ.29ರಂದು ಪರೀಕ್ಷೆ ಪ್ರಾರಂಭವಾಗುವ ಸಮಯದಿಂದ ಪರೀಕ್ಷಾ ಅವಧಿ ಮುಕ್ತಾಯವಾಗುವವರಗೆ ಸದರಿ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಾಯ್ದೆಯ ಕಲಂ 144ರಂತೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಯನ್ನು ಪರೀಕ್ಷಾವಧಿಯಲ್ಲಿ ಮುಚ್ಚುವಂತೆ ನೋಡಿಕೊಳ್ಳತಕ್ಕದ್ದು, ಪರೀಕ್ಷಾ ಕೇಂದ್ರದ ಆವರಣದಲ್ಲಿ ಅಭ್ಯರ್ಥಿಗಳು ಇಲೆಕ್ಟಾçನಿಕ್ಸ್ ವಸ್ತುಗಳು ಅಂದರೆ, ಮೊಬೈಲ್ ಪೋನ್‌ಗಳು, ಸ್ಮಾರ್ಟ್ವಾಚ್, ವೈರ್‌ಲೆಸ್/ ಬ್ಲೂಟೂತ್, ಈಯರ್ ಹೆಡ್‌ಫೋನ್‌ಗಳನ್ನು ಬಳಸುವುದು ಹಾಗೂ ಹೊಂದುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.