Slide
Slide
Slide
previous arrow
next arrow

ರಾಜ್ಯಮಟ್ಟದ ಫುಟ್ಬಾಲ್ ಕ್ರೀಡಾಕೂಟ: ಜನಗಾ ಪ್ರೌಢಶಾಲಾ ತಂಡ ಆಯ್ಕೆ

300x250 AD

ಹಳಿಯಾಳ: ವಿಜಯಪುರದ ಸೈನಿಕ ಶಾಲಾ ಮೈದಾನದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆ ಪ್ರತಿನಿಧಿಸಿದ ಜನಗಾ ಸರ್ಕಾರಿ ಪ್ರೌಢಶಾಲೆಯ 17 ವಯೋಮಿತಿ ಒಳಗಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ.

ವಿದ್ಯಾರ್ಥಿನಿಯರು ಬೆಂಗಳೂರಿನ ವಿದ್ಯಾನಗರನಲ್ಲಿ ಜರಗುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಎಲ್ಲ ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣ ಶಿಕ್ಷಕ ವಿನಾಯಕ ಪೂಜಾರಿ ತರಬೇತಿ ನೀಡಿದ್ದಾರೆ. ತಂಡದ ಮೇಲ್ವಿಚಾರಕರಾಗಿ ಅಶ್ವಿನಿ ಗುತ್ತಲ ವಹಿಸಿದ್ದರು. ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಸಕ ಆರ್.ವಿ.ದೇಶಪಾಂಡೆ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ ತಾರಿಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವಿವೇಕಾನಂದ ಬಿ.ಕವರಿ, ಜನಗಾ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು, ಎಸ್‌ಡಿಎಮ್‌ಸಿ ಅಧ್ಯಕ್ಷ ರವಿ ಹರಿಜನ ಹಾಗೂ ಸದಸ್ಯರು, ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರು ಅಭಿನಂದನೆಗಳು ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top