Slide
Slide
Slide
previous arrow
next arrow

ವಿದ್ಯಾರ್ಥಿಗಳ ಬಸ್ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ

300x250 AD

ಹಳಿಯಾಳ: ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಸಾರಿಗೆ ಬಸ್ ಸಮಸ್ಯೆ ಬಗೆಹರಿಸದಿದ್ದರೆ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸುವುದಾಗಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ಎಚ್ಚರಿಕೆ ನೀಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಲಾ- ಕಾಲೇಜು ವಿದ್ಯಾಭ್ಯಾಸಕ್ಕಾಗಿ ಪ್ರತಿದಿನ ವಿದ್ಯಾರ್ಥಿಗಳು ಹಳಿಯಾಳದಿಂದ- ಧಾರವಾಡಕ್ಕೆ ತೆರಳುವುದು ಅನಿವಾರ್ಯವಾಗಿದೆ. ಮುಂಜಾನೆಯೇ ಸರಿಯಾಗಿ ಬಸ್‌ಗಳ ವ್ಯವಸ್ಥೆ ಇಲ್ಲವಾಗಿದೆ. ತಡೆರಹಿತ ಬಸ್ ಇದ್ದರೂ ಸಹ ಬಸ್ ಪಾಸ್ ಹೊಂದಿದ ವಿದ್ಯಾರ್ಥಿಗಳಿಗೆ ಅದರಲ್ಲಿ ಪ್ರಯಾಣಿಸಲು ಅವಕಾಶ ಇಲ್ಲವಾಗಿದೆ. ಇದರಿಂದಾಗಿ ಅವರ ಶಿಕ್ಷಣಕ್ಕೆ ಸಮಸ್ಯೆ ಉಂಟಾಗುತ್ತಿದ್ದು, ಪ್ರತಿದಿನ ಮುಂಜಾನೆ ನಿಗದಿತ ಸಮಯಯದಲ್ಲಿ ಹಳಿಯಾಳದಿಂದ ಧಾರವಾಡಕ್ಕೆ ತೆರಳಲು 2ರಿಂದ 3 ಹೆಚ್ಚುವರಿ ಬಸ್ ಬಿಡುವಂತೆ ಆಗ್ರಹಿಸಿದ್ದಾರೆ.

300x250 AD

ಸೋಮವಾರದ ಒಳಗಾಗಿ ಸಮಸ್ಯೆ ಬಗೆಹರಿಸದಿದ್ದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಅನೀಸ್ ಪಿರವಲೆ, ಮಹೇಶ್ ಹುಲಕೊಪ್ಪ, ಕಿರಣ್ ಕಮ್ಮಾರ್ ಇದ್ದರು.

Share This
300x250 AD
300x250 AD
300x250 AD
Back to top