Slide
Slide
Slide
previous arrow
next arrow

ಗಣೇಶ ಬಿಷ್ಠಣ್ಣನವರಗೆ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪ್ರದಾನ

300x250 AD

ಕಾರವಾರ: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಪ.ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಶೈಕ್ಷಣಿಕ ಮತ್ತು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕರ್ನಾಟಕ ರಾಜ್ಯ ಪ.ಪಂಗಡ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರು, ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕರು, ಜೊತೆಗೆ ಸಮುದಾಯದ ಸಂಘಟನೆಯ ನೇತಾರ, ಲಯನ್ಸ್ ಕ್ಲಬ್ ಸದಾಶಿವಗಡದ ಅಧ್ಯಕ್ಷ ಗಣೇಶ ಬಿಷ್ಠಣ್ಣನವರ ಅವರಿಗೆ ಪ್ರಸಕ್ತ ಸಾಲಿನ ಜಿಲ್ಲಾ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನಿಸಲಾಗಿದೆ.

ಪ.ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿಯನ್ನ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನೀಡಿ ಗೌರವಿಸಿ, ಮತ್ತಷ್ಟು ಸಮುದಾಯದ ಪ್ರಗತಿಗೆ ತಮ್ಮ ಕಾಯಕವನ್ನು ಮುಂದುವರಿಸಿ ಎಂದು ಶುಭಾಶಯಗಳನ್ನು ಕೋರಿದರು. ಪ್ರಶಸ್ತಿ ಸ್ವೀಕರಿಸಿದ ಗಣೇಶ ಬಿಷ್ಠಣ್ಣನವರ ಜಿಲ್ಲಾಡಳಿತ ಮತ್ತು ಇಲಾಖೆಗೆ ಕೃತಜ್ಞತೆಯನ್ನು ಅರ್ಪಿಸಿದರು.

      ವೇದಿಕೆಯ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ನಾಗೇಶ ರಾಯ್ಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಪ.ವರ್ಗಗಳ ಕಲ್ಯಾಣಾಧಿಕಾರಿ ಉಮೇಶ ವೈ.ಕೆ., ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗರಾಜ ತಳವಾರ, ದ.ರ.ವೇದಿಕೆಯ ದೀಪಕ್ ಕುಡಾಳಕರ, ನಗರಸಭೆಯ ಸದಸ್ಯ ಹನುಮಂತಪ್ಪ ತಳವಾರ ಮತ್ತು ವಿವಿಧ ಸಂಘಟನೆಯ ಮುಖಂಡರು, ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top