Slide
Slide
Slide
previous arrow
next arrow

ಮಹರ್ಷಿ ವಾಲ್ಮೀಕಿ ಮನುಕುಲದ ಮಹಾನ್ ಸಂತ: ಗಂಗೂಬಾಯಿ ಮಾನಕರ್

300x250 AD

ಕಾರವಾರ: ಶ್ರೀ ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಅವರು ಇಡೀ ಮನುಕುಲಕ್ಕೆ ಬೇಕಾದ ಮಹಾನ್ ಸಂತರಾಗಿದ್ದಾರೆ. ರಾಮಾಯಣ ಮಹಾಕಾವ್ಯದ ಮೂಲಕ ನಾವು ಹೇಗೆ ಮೌಲ್ಯಯುತ ಬದುಕು ಕಟ್ಟಿಕೊಳ್ಳಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ಹಾಕಿಕೊಟ್ಟ ಹೆಜ್ಜೆಯಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ನಾವು ಕಲಿಯಬಹುದಾಗಿದೆ. ಪರಿಶಿಷ್ಟ ಸಮಾಜದವರು ಇಂದಿಗೂ ಶಿಕ್ಷಣದಿಂದ ದೂರ ಉಳಿದಿದ್ದಾರೆ. ಅವರನ್ನು ಅಕ್ಷರ ಲೋಕಕ್ಕೆ ಕರೆತಂದು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಾಗಿದೆ. ಪ್ರಮುಖವಾಗಿ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಕಟ್ಟಿಕೊಡಬೇಕಾದ ಕಾರ್ಯವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ತಳ ಸಮುದಾಯವಾದ ಈ ಸಮಾಜಕ್ಕೆ ಸಿಕ್ಕಿರುವ ಮೀಸಲಾತಿಯನ್ನು ಪ್ರತಿಯೊಬ್ಬರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ವಿಶೇಷ ಉಪನ್ಯಾಸ ನೀಡಿದ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ಶಿಕ್ಷಕ ಜೆ.ಬಿ. ತಿಪ್ಪೇಸ್ವಾಮಿ, ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆಯಾಗಿದೆ. ವಾಲ್ಮೀಕಿ ರಾಮಾಯಣ ದೇಶ-ಭಾಷೆಗೆ ಸೀಮಿತಗೊಳ್ಳದೆ ಜಾಗತಿಕವಾಗಿ ಆರಾಧಿಸಲ್ಪಟ್ಟಿದೆ. ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ನಾವು ಕಲಿಯಬಹುದಾಗಿದೆ. ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ-ಮನುಷ್ಯರ ನಡುವಿನ ಸಂಬಂಧಗಳು ಕುಸಿಯುತ್ತಿರುವ ಪ್ರಸ್ತುತ ದಿನಗಳಲ್ಲಿ ಆದಿ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ಮಹಾಕಾವ್ಯ ದಾರಿದೀಪವಾಗಿ ತೋರುತ್ತದೆ ಎಂದು ತಿಳಿಸಿದರು.

300x250 AD

ಜಿಲ್ಲಾ ವಾಲ್ಮೀಕಿ ಸಮಾಜದ ಹಿತರಕ್ಷಣಾ ಸಂಘದ ಅಧ್ಯಕ್ಷ ನಾಗರಾಜ ತಳವಾರ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಿರುವುದು ಸಂತೋಷವಾಗುತ್ತದೆ. ವಾಲ್ಮೀಕಿ ಕೇವಲ ಒಂದು ಸಮಾಜಕ್ಕೆ ಸಿಮಿತವಾಗಿರದೇ ಎಲ್ಲ ಸಮುದಾಯದಕ್ಕೂ ಸೇರಿದವರಾಗಿದ್ದಾರೆ ಎಂದರು. ಇದೇ ವೇಳೆ 2022- 23ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿ ರಕ್ಷಿತಾ ರಾಮ ಗೊಂಡ ಇವರಿಗೆ 1 ಲಕ್ಷ ಚೆಕ್ ಹಾಗೂ ಪ್ರಮಾಣ ಪತ್ರ ಹಾಗೂ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು. ಹಾಗೆಯೇ ಪಿಯುಸಿಯಲ್ಲಿ ಅತೀ ಹೆಚ್ವು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು. ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಗಣೇಶ ಬಿಷ್ಟಣ್ಣನವರ್ ಅವರನ್ನು ಸನ್ಮಾನಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡುತ್ತಾ, ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್, ಜಿ.ಪಂ ಉಪಕಾರ್ಯದರ್ಶಿ ನಾಗೇಶ ರಾಯ್ಕರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಉಮೇಶ ವೈ.ಕೆ, ವಿವಿಧ ಸಂಘಟನೆಯ ಮುಖಂಡರಾದ ದೀಪಕ ಕುಡಾಳಕರ ಹನುಮಂತಪ್ಪ ತಳವಾರ, ಮಾದವ ನಾಯಕ್, ಜೆ.ಡಿ ಮನೋಜ, ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರರು ಇದ್ದರು. ಕುಮಟಾ ತಾಲ್ಲೂಕಿನ ಕುಜಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳು ಪ್ರಾಥಿಸಿದರು, ಶಿಕ್ಷಕಿ ವಸಂತಲಕ್ಷ್ಮಿ ಸ್ವಾಗತಿಸಿ ನಿರೂಪಿಸರು, ನಿಲಯಪಾಲಕ ಶಂಕರ ಪೊಳ್ ವಂದಿಸಿದರು.

Share This
300x250 AD
300x250 AD
300x250 AD
Back to top