ಕುಮಟಾ: ಭಗವಾನ್ ಶ್ರೀ ಸತ್ಯ ಸಾಯಿಬಾಬಾರವರ 98 ನೇ ಜನ್ಮದಿನೋತ್ಸವದ ಪ್ರಯುಕ್ತ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಯಿಂದ ಉತ್ತರ ಕನ್ನಡ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಹಾಗೂ ಇಂಗ್ಲೀಷ ಮಾಧ್ಯಮದಲ್ಲಿ ಪ್ರತ್ಯೇಕವಾಗಿ ನಡೆಸಿ “ನಮ್ಮ ಗ್ರಹವನ್ನು ಸುರಕ್ಷಿತವಾಗಿಡಲು ಮರವನ್ನು ನೆಡಿ” ಎಂಬ ವಿಷಯದ ಕುರಿತು ಸೆ.9ರಂದು ಸ್ಪರ್ಧೆ ಏರ್ಪಡಿಸಲಾಗಿತ್ತು.
ಜಿಲ್ಲೆಯಿಂದ ಒಟ್ಟೂ 613 ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಸ್ಪರ್ಧೆಯಲ್ಲಿ ಕೆನರಾ ಎಕ್ಸಲೆನ್ಸ್ ಪಿ.ಯು. ಕಾಲೇಜು ಗೋರೆ, ಕುಮಟಾದ ದ್ವಿತೀಯ ಪಿಯುಸಿ ಗಣಕವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪೂಜಾ ಶಂಭು ಅವಧಾನಿ ಕನ್ನಡ ಮಾಧ್ಯಮದಲ್ಲಿ ಪ್ರಬಂಧವನ್ನು ಬರೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಅಧ್ಯಕ್ಷರು, ಪ್ರಾಚಾರ್ಯರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.