Slide
Slide
Slide
previous arrow
next arrow

ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ಡಿಸಿ ಮಾನಕರ

300x250 AD

ಕಾರವಾರ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ರಾಜ್ಯಾದ್ಯಂತ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆಯಲ್ಲಿಯೂ ಸಹ ವಿಶೇಷವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ನ.1ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ- 50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯುವುದು. ಅಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸುವುದು. ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸುವುದು.

300x250 AD

ಸಂಜೆ 7 ಗಂಟೆಗೆ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು. ಜಿಲ್ಲೆಯ ಎಲ್ಲಾ ನಾಗರಿಕರು ಹಾಗೂ ಸಂಘ ಸಂಸ್ಥೆಗಳು ಮೇಲಿನ ಎಲ್ಲಾ ಕಾರ್ಯಕ್ರಮಗಳನ್ನು ತಮ್ಮ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top