Slide
Slide
Slide
previous arrow
next arrow

ಮಾರಿಗುಡಿ ದಸರಾ ಉತ್ಸವ ಸ್ಫರ್ಧೆ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 2023 ನೇ ಸಾಲಿನ ದಸರಾ ಉತ್ಸವದಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕ್ರೀಡಾ ವಿಭಾಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ಪ್ರಥಮ ಸ್ಥಾನವನ್ನು, ಬ್ಯಾಡ್ಮಿಂಟನ್, ಗುಂಡುಎಸೆತ, 200ಮೀ ಓಟಗಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಸಾಂಸ್ಕೃತಿಕ ವಿಭಾಗದಲ್ಲೂ ಕೂಡ ಸಮೂಹ ದೇಶಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಅಲ್ಲದೇ ಭರತನಾಟ್ಯ, ಜಾನಪದ ಗೀತೆ, ಭಕ್ತಿ ಗೀತೆ, ಭಗವದ್ಗೀತೆ ಕಂಠಪಾಠ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಧ್ಯಾನ ಮಾಲಿಕೆ, ಚಿತ್ರಕಲೆ,ಛದ್ಮವೇಷ ಹೀಗೆ ವಿವಿಧ ವೈಯಕ್ತಿಕ ಸ್ಪರ್ಧೆಯಲ್ಲೂ ಭಾಗವಹಿಸಿದ ಹಲವಾರು ವಿದ್ಯಾರ್ಥಿಗಳು ಬಹುಮಾನವನ್ನು ತಮ್ಮದಾಗಿಸಿಕೊಂಡು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದು, ಶಾಲೆಯ ಶಿಕ್ಷಕರೂ ಸಹ ವಿವಿಧ ವಿಭಾಗದ ನಿರ್ಣಾಯಕರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ, ತರಬೇತಿ ನೀಡಿದವರಿಗೆ, ಬೆನ್ನೆಲುಬಾಗಿ ನಿಂತ ಪೋಷಕರಿಗೆ, ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು, ಶಿರಸಿ ಲಯನ್ಸ ಕ್ಲಬ್ ಬಳಗ, ಪ್ರಾಂಶುಪಾಲರು, ಶಿಕ್ಷಕ ವೃಂದ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top