ಹೊನ್ನಾವರ: ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲ್ಕೋಡನಲ್ಲಿ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಜರುಗಿತು.
ಕಾರ್ಯಕ್ರಮವನ್ನು ತಾಲೂಕು ಆರೊಗ್ಯಾಧಿಕಾರಿ ಡಾ.ಉಷಾ ಹಾಸ್ಯಗಾರ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನದಲ್ಲಿ ತಂಬಾಕು ಸೇವನೆ ಹೆಚ್ಚಾಗಿದೆ. ಹದಿಹರೆಯದ ವಯಸ್ಸಿನಲ್ಲಿ ಹಲ್ಲಿನ ಸಮಸ್ಯೆಗಳು ಹೆಚ್ಚು ಕಂಡುಬರುತ್ತದೆ. ಸರಿಯಾದ ರೀತಿಯಲ್ಲಿ ಹಲ್ಲಿನ ಸ್ವಚ್ಚತೆ, ರಕ್ಷಣೆ ಮಾಡದೆ ನಿರ್ಲಕ್ಷ್ಯ ಮಾಡಿದರೆ ಹಲ್ಲಿನ ಸಮಸ್ಯೆಗಳು ಹೆಚ್ಚಾಗುತ್ತದೆ. ಗ್ರಾಮೀಣ ಭಾಗದಲ್ಲಿಯೂ ಇಂತಹ ಶಿಬಿರ ಹಮ್ಮಿಕೊಂಡಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಲು ತಿಳಿಸಿದರು.
ಈ ಶಿಬಿರಕ್ಕೆ ಭಟ್ಕಳ ತಾಲೂಕು ಆಸ್ಪತ್ರೆಯ ದಂತ ವೈದ್ಯರಾದ ಡಾ.ವೀಣಾ ಶಿರೂರು, ಹೊನ್ನಾವರ ತಾಲ್ಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಅನುರಾದ, ಡಾ.ತೇಜಸ್ವಿನಿ ಹಾಗೂ ಡಾ.ಸಂತೋಷ ಹಾಜರಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿ ಚಿದಾನಂದ ಎಸ್. ಸ್ವಾಗತಿಸಿದರು.