Slide
Slide
Slide
previous arrow
next arrow

ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

300x250 AD

ಕುಮಟಾ: ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ ಕೆ ಭಂಡಾರಕರ್ ಪದವಿಪೂರ್ವ ಕಾಲೇಜು ಹಾಗೂ ವಿದಾತ್ರಿ ಅಕಾಡೆಮಿ ಮಂಗಳೂರು ವತಿಯಿಂದ ಕನ್ನಡರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕರ್ನಾಟಕ ನಕ್ಷೆಗೆ ದೀಪವನ್ನು ಹಚ್ಚಿ ತಾಯಿ ಭುವನೇಶ್ವರಿ ದೇವಿಗೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉಪನ್ಯಾಸಕಿ ದೀಕ್ಷಿತಾ ಕುಮಟಾಕರ್ ರಾಜ್ಯೋತ್ಸವದ ಕುರಿತು ಮಾತನಾಡಿದರು.

ಕನ್ನಡ ಉಪನ್ಯಾಸಕ ಕಾಗಾಲ ಚಿದಾನಂದ ಭಂಡಾರಿಯವರು ನಾಡು ನುಡಿಯ ಕುರಿತಾದ ಅಭಿಮಾನದ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಕಿರಣ ಭಟ್ಟ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿಯವರು, ಉಪಪ್ರಾಚಾರ್ಯೆ ಸುಜಾತಾ ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

300x250 AD

ಶಿವಾನಿ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಭೂಮಿಕಾ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಉಪನ್ಯಾಸಕಿ ಶಿಲ್ಪಾ ನಾಯ್ಕ ವಂದನಾರ್ಪಣೆ ಗೈದರು. ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Share This
300x250 AD
300x250 AD
300x250 AD
Back to top