ಕಾರವಾರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದ ಹೋರಾಟಗಾರ್ತಿ ಯಮುನಾ ಗಾಂವಕರ್ ಪ್ರಶಸ್ತಿಯನ್ನ ತಿರಸ್ಕರಿಸಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಸರ್ಕಾರದ ಎದುರು ಅನೇಕ ಸಮಸ್ಯೆಗಳ ವಿರುದ್ಧ ಪರಿಹಾರಕ್ಕೆ ಪ್ರತಿನಿತ್ಯ ಹೋರಾಟದ ಮಾರ್ಗದಲ್ಲಿದ್ದೇನೆ. ಹೀಗೆ ಸಂಘಟನಾ ಚೌಕಟ್ಟಿನಲ್ಲಿ ಇರುವುದರಿಂದಲೂ, ವೈಯಕ್ತಿಕವಾಗಿಯೂ ಸರ್ಕಾರ ಕೊಡಮಾಡುವ ಈ ಪ್ರಶಸ್ತಿಯನ್ನು ನಾನು ಸ್ವೀಕರಿಸುವುದಿಲ್ಲವೆಂದು ಅವರು ತಿಳಿಸಿದ್ದಾರೆ. ಪ್ರಶಸ್ತಿಗಾಗಿ ಎಲ್ಲಿಯೂ ಅರ್ಜಿ ಹಾಕಿಲ್ಲ. ಸಮಾಜದಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಿದ ಇನ್ನೋರ್ವರನ್ನು ಅವರ ಒಪ್ಪಿಗೆಯೊಂದಿಗೆ ಪ್ರಶಸ್ತಿಗೆ ಆಯ್ಕೆ ಮಾಡಿ ನೀಡಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ.