ಶಿರಸಿ: ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಕರ್ನಾಟಕ ವಿಶ್ವವಿದ್ಯಾಲಯವು ಸಂಗೀತ ವಿಷಯದಲ್ಲಿ ನೀಡುವ 2021-22 ನೇ ಸಾಲಿನ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾಳೆ.
ಇವಳ ಈ ಸಾಧನೆಗೆ ಎಂಇಎಸ್ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ, ಎಂಎಂ ಕಾಲೇಜು ಉಪಸಮಿತಿಯ ಅಧ್ಯಕ್ಷ ಎಸ್.ಕೆ. ಭಾಗ್ವತ್, ಪ್ರಾಚಾರ್ಯರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.