ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಪ್ರಣವಾನಂದ ಸ್ವಾಮೀಜಿಗಳ ಶಕ್ತಿಪೀಠದ ದ್ವಿತೀಯ ವರ್ಷದ ಪೀಠಾರೋಹಣ ಹಾಗೂ ಉತ್ತರಾಧಿಕಾರಿಗಳಾದ ಶ್ರೀ ಶರಣಬಸವ ವೇದಪ್ರಕಾಶ ಅವರ ಪಂಚವಾರ್ಷಿಕ ಜನ್ಮ ವರ್ಧಂತೋತ್ಸವ ಹಾಗೂ ಪುರಪ್ರವೇಶ ಧಾರ್ಮಿಕ ಸಭೆ ನ.28ರಂದು ಕರದಾಳ ಗ್ರಾಮದಲ್ಲಿ ನಡೆಯಲಿದ್ದು, ಈ ನಿಮಿತ್ತ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯನ್ನು ನ.5ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ನಾಮಧಾರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿ ತಾಲೂಕು ಅಧ್ಯಕ್ಷ ದಾಮೋದರ ಜಿ.ನಾಯ್ಕ ಹೇಳಿದರು.
ಶುಕ್ರವಾರ ಅವರು ಪಟ್ಟಣದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಬೇಕು. ಶ್ರೀ ಪ್ರಣವಾನಂದ ಸ್ವಾಮೀಜಿಯವರು ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿದ್ದು, ಅವರ ಹೋರಾಟಕ್ಕೆ ನಾವು ಜತೆಯಾಗಬೇಕು ಎಂದರು.
ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ವಿ. ನಾಯ್ಕ ಮಾತನಾಡಿ, ಪ್ರಣವಾನಂದ ಸ್ವಾಮೀಜಿಯವರು ಸಮಾಜ ಕಟ್ಟುವ ಕಾರ್ಯಕ್ಕೆ ಮುಂದಾಗಿದ್ದು, ನಾವು ಅವರಿಗೆ ಸಂಪೂರ್ಣ ಸಹಕಾರ ನೀಡಬೇಕು. ಉತ್ತಮ ಕೆಲಸಗಳಿಗೆ ಸಮಾಜ ಬಾಂಧವರು ಪ್ರೋತ್ಸಾಹ ನೀಡುತ್ತಲೇ ಬಂದಿದ್ದು, ಪೂರ್ವಭಾವಿ ಸಭೆಗೂ ಕೂಡ ಜನರು ಆಗಮಿಸಬೇಕು ಎಂದರು.
ರಾಷ್ಟ್ರೀಯ ಈಡಿಗ ಮಹಾಮಂಡಳಿಯ ತಾಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ ಮಂಜಗುಣಿ ಮಾತನಾಡಿ, ನ.5ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಕರುಣಾಕರ ನಾಯ್ಕ, ಸಮಿತಿಯ ಜಿಲ್ಲಾಧ್ಯಕ್ಷ ವೀರಭದ್ರ ನಾಯ್ಕ, ತಾಲೂಕು ನಾಮಧಾರಿ ಆರ್ಯ ಈಡಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ನಾಗೇಶ ನಾಯ್ಕ ಆಚಾ, ಕರ್ನಾಟಕ ಆರ್ಯ ಈಡಿಗ ನಾಮಧಾರಿ ತಾಲೂಕು ಅಧ್ಯಕ್ಷ ಎಂ.ಪಿ.ನಾಯ್ಕ, ನಾಮಧಾರಿ ಈಡಿಗ ನೌಕರರ ಸಂಘದ ಅಧ್ಯಕ್ಷ ಗಣಪತಿ ನಾಯ್ಕ, ಸಗಡಗೇರಿ ಗ್ರಾ.ಪಂ. ಅಧ್ಯಕ್ಷ ಶ್ರವಣಕುಮಾರ ನಾಯ್ಕ, ಜಿಲ್ಲಾ ಮಹಿಳಾ ಗೌರವಾಧ್ಯಕ್ಷೆ ಮಂಜುಳಾ ನಾಯ್ಕ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ಸಮಾಜದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಈಡಿಗ ಮಹಾಮಂಡಳಿ ತಾಲೂಕು ಗೌರವಾಧ್ಯಕ್ಷ ಮಾದೇವ ಎಂ. ನಾಯ್ಕ, ಉಪಾಧ್ಯಕ್ಷರಾದ ರಮೇಶ ಎನ್. ನಾಯ್ಕ ಬೊಬ್ರುವಾಡ, ರಮೇಶ ಎಸ್. ನಾಯ್ಕ ತೆಂಕಣಕೇರಿ, ಮಹಿಳಾ ಜಿಲ್ಲಾ ಗೌರವಾಧ್ಯಕ್ಷೆ ಮಂಜುಳಾ ನಾಯ್ಕ, ಯುವ ಘಟಕದ ಅಧ್ಯಕ್ಷ ಮಂಜುನಾಥ ಕೆ. ನಾಯ್ಕ, ಮಹಿಳಾ ಅಧ್ಯಕ್ಷೆ ಲೀಲಾವತಿ ನಾಯ್ಕ, ಖಜಾಂಚಿ ಶ್ರೀಪಾದ ನಾಯ್ಕ ಇತರರು ಉಪಸ್ಥಿತರಿದ್ದರು.