ಕಾರವಾರ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
2022ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ತರಬೇತುದಾರರುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಆನ್‌ಲೈನ್ ವೆಬ್‌ಸೈಟ್ https://sevasindhu.karnataka.gov.inಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಹಿರಿಯ ಕ್ರೀಡಾಪಟುಗಳು/ತರಬೇತುದಾರರು ಅರ್ಜಿಯನ್ನು ನ.30 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಇಲ್ಲಿಂದ ಪಡೆಯಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.