ಕಾರವಾರ: ರಾಜ್ಯ ಪೊಲೀಸ್ ಕಂಪ್ಯೂಟರ್ ವಿಂಗ್ ಎಡಿಜಿಪಿ ಪ್ರಣವ್ ಮೊಹಾಂತಿ ನಗರಕ್ಕೆ ಭೇಟಿ ನೀಡಿ, ಜಿಲ್ಲಾ ಪೊಲೀಸರ ಪರಿವೀಕ್ಷಣೆ ನಡೆಸಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪಥಸಂಚಲನ ವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದ ಅವರು, ಮೈದಾನದಲ್ಲಿ ಪೊಲೀಸ್ ಇಲಾಖೆಯ ವಾಹನಗಳ ತಪಾಸಣೆ ನಡೆಸಿದರು. ವಾಹನಗಳ ಸ್ಥಿತಿಗತಿ ಪರಿಶೀಲಿಸಿ ಸಿಬ್ಬಂದಿಯ ಕಾರ್ಯವೈಖರಿಯ ಮಾಹಿತಿ ಪಡೆದರು.
ಈ ವೇಳೆ ವಾಹನದ ಕುರಿತು ಸಿಬ್ಬಂದಿಯನ್ನ ಪ್ರಶ್ನಿಸಿ, ವಾಹನದೊಂದಿಗೆ ನೀಡಲಾದ ಅಗತ್ಯ ಸಲಕರಣೆಗಳ ಬಳಕೆ ಕುರಿತು ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಲಾದ ವಾಹನಗಳು ಸುಸ್ಥಿತಿಯಲ್ಲಿರುವ ಕುರಿತು ಕೂಲಂಕುಶವಾಗಿ ಪರಿಶೀಲಿಸಿದರು.