ಶಿರಸಿ: ಅಕ್ಟೋಬರ್ ತಿಂಗಳಿನ ಪಿಡಿಒ ಆಫ್ ದಿ ಮಂಥ್ ಪ್ರಶಸ್ತಿಗೆ ಭಾಗವತಿಯ ಜಗದೀಶ ದೇಸಾಯಿ ಆಯ್ಕೆಯಾಗಿದ್ದು, ಶನಿವಾರ ಜಿ.ಪಂ ಸಭಾಭವನದಲ್ಲಿ ಜರುಗಿದ ಸಭೆಯಲ್ಲಿ ಸಚಿವ ಮಂಕಾಳ ವೈದ್ಯ ಪ್ರಶಸ್ತಿ ಪ್ರದಾನ ಮಾಡಿದರು.
ಹಳಿಯಾಳ ತಾಲೂಕಿನ ಭಾಗವತಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಗದೀಶ ಕೆ. ದೇಸಾಯಿಯವರ ಕಾರ್ಯವೈಖರಿಗೆ ಜಿ.ಪಂ ಅಕ್ಟೋಬರ್ ಮಾಹೆಯ ಪಿಡಿಒ ಆಫ್ ದಿ ಮಂಥ್ ಪ್ರಶಸ್ತಿಯನ್ನು ಘೋಷಿಸಿದ್ದು, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸತೀಶ ಸೈಲ, ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ ಸೇರಿದಂತೆ ಜಿಲ್ಲಾ ಪಂಚಾಯತ್‌ನ ಎಲ್ಲ ಶಾಖೆಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.