
ಶಿರಸಿ: ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಮಾಧ್ಯಮಿಕ ಶಿಕ್ಷಣಾಲಯ ನೀರ್ನಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕು. ದಿಗಂತ ಪಾಂಡುರಂಗ ನಾಯಕ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಕುಮಾರಿ ಅಮೃತ ಮಂಜುನಾಥ ಗೌಡ 100 ಮೀಟರ್ ಅಡೆತಡೆ (ಹರ್ಡಲ್ಸ್) ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳ ಸಾಧನೆಗೆ ಸಿಬ್ಬಂದಿ ವರ್ಗ ಹಾಗೂ ಮಾಧ್ಯಮಿಕ ಶಿಕ್ಷಣ ಸಮಿತಿಯ ಆಡಳಿತ ಮಂಡಳಿಯವರು ಹರ್ಷ ವ್ಯಕ್ತಪಡಿಸಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿ ಮುಂದಿನ ಕ್ರೀಡಾಕೂಟದಲ್ಲಿ ಯಶಸ್ಸು ಸಿಗಲಿ ಎಂದು ಶುಭಕೋರಿದ್ದಾರೆ.