Slide
Slide
Slide
previous arrow
next arrow

ಆಟೋ ಡಿಕ್ಕಿ: ಪಾದಚಾರಿ ಸಾವು

300x250 AD

ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ರಂಗಿನಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಮುಹಮ್ಮದ್ ಅಶ್ರಫ್ ಇಬ್ನ್ ಅಬ್ದುಲ್ ರಶೀದ್ ಖಾನ್ (60) ಎಂದು ಗುರುತಿಸಲಾಗಿದ್ದು, ಅವರು ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು ಬದಿಯಲ್ಲಿರುವ ತನ್ನ ಮನೆಗೆ ಹೋಗಲು ಹೆದ್ದಾರಿ ದಾಟುತ್ತಿದ್ದಾಗ ನವಾಯತ್ ಕಾಲೋನಿಯಿಂದ ಸರ್ಕಲ್ ಕಡೆಗೆ ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅಶ್ರಫ್ರನ್ನು ಸ್ಥಳೀಯರು ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಕುಂದಾಪುರ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

300x250 AD

Share This
300x250 AD
300x250 AD
300x250 AD
Back to top