Slide
Slide
Slide
previous arrow
next arrow

ಅಥ್ಲೆಟಿಕ್ಸ್: ಕೆಎಲ್‌ಇ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

300x250 AD

ಅಂಕೋಲಾ: ಜಿಲ್ಲಾ ಅಥ್ಲೆಟಿಕ್ಸ್ ಅಸೋಶಿಯೇಶನ್ ಹಾಗೂ ಅಂಕೋಲಾ ಸ್ಪೋರ್ಟ್ಸ್ ಮತ್ತು ಸೋಶಿಯಲ್ ಅಸೋಶಿಯೇಶನ್ ಸಂಯುಕ್ತ ಆಶ್ರಯದಲ್ಲಿ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ-2023, 20 ವರ್ಷದವರೊಳಗಿನ ವಿಭಾಗದಲ್ಲಿ ಕೆಎಲ್‌ಇ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ. ಪ್ರಥಮ ವರ್ಷದ ವಿದ್ಯಾರ್ಥಿನಿ ಚಂದ್ರಿಕಾ ಎಸ್.ಗೌಡ 10 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ 3 ಕಿ.ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈ ಸಾಧನೆಗೆ ಭರತ ಅಕಾಡೆಮಿ ತರಬೇತುದಾರರಾದ ಸುಧೀರ ನಾಯ್ಕ, ಕೆಎಲ್‌ಇ ಸಂಸ್ಥೆಯ ಬೆಳಗಾವಿ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಕಾರ್ಯದರ್ಶಿ ಡಾ.ಬಿ.ಜಿ. ದೇಸಾಯಿ, ಅಂಕೋಲಾ ಸ್ಥಾನಿಕ ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಡಿ.ಎಲ್. ಭಟ್ಕಳ, ಸಂಯೋಜಕ ಆರ್.ನಟರಾಜ, ಆಡಳಿತಾಧಿಕಾರಿ ಡಾ.ಮಿನಲ್ ನಾರ್ವೇಕರ, ಪ್ರಾಚಾರ್ಯ ಅಶ್ವತ್ಥನಾರಾಯಣ ಎಸ್.ಹೆಗಡೆ, ಬೋಧಕ-ಬೋಧಕೇತರ ಸಿಬ್ಬಂದಿಗಳು ಕೆಎಲ್‌ಇ ಸಂಸ್ಥೆ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top