ಯಲ್ಲಾಪುರ: ಪಟ್ಟಣ ಅಡಿಕೆ ಭವನದಲ್ಲಿ ತಾಲೂಕಾ ಶಿಕ್ಷಕರ ದಿನಾಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ‘ಶಿಕ್ಷಕರ ದಿನಾಚರಣೆಯ ಗುರು ಗೌರವಾರ್ಪಣೆ’ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ತಾಲೂಕಿನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಅಭಿನಂದಿಸಿದರು ಹಾಗೂ ತಾಲೂಕಿನ ನಿವೃತ್ತ ಶಿಕ್ಷಕರಿಗೆ ಈ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಪ.ರಾ.ವಿ.ಸ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪ.ಪಂ ಅಧ್ಯಕ್ಷ ಸುನಂದಾ ದಾಸ್, ಉಪಾಧ್ಯಕ್ಷ ಶ್ಯಾಮಲಿ ಪಾಟಣಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.