Slide
Slide
Slide
previous arrow
next arrow

ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಟಿವಿ ರಿಪೇರಿ ತರಬೇತಿ

300x250 AD

ಕಾರವಾರ.ನ.6.(ಕರ್ನಾಟಕ ವಾರ್ತೆ):- ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಡಿಸೆಂಬರ್ ತಿಂಗಳಿನಲ್ಲಿ 30 ದಿನಗಳವರೆಗೆ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಟಿವಿ ರಿಪೇರಿ ತರಬೇತಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿ0ದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುತ್ತದೆ.

300x250 AD

ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ : tel:+919980510717, tel:+918217236973,tel:+919482188780,tel:+919483485489 ನ್ನು ಸಂಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.

Share This
300x250 AD
300x250 AD
300x250 AD
Back to top