Slide
Slide
Slide
previous arrow
next arrow

ನ.9 ರಂದು ನಂದೊಳ್ಳಿ ಶಾಲೆಯಲ್ಲಿ ಮಕ್ಕಳ ಕವಿಗೋಷ್ಠಿ

300x250 AD

ಯಲ್ಲಾಪುರ : ತಾಲೂಕಿನ ನಂದೊಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಕಾರ್ತಿಕ 2023 ಅನುದಿನ ಅನುಸ್ಪಂದನ ಅಂಗವಾಗಿ ನ.9 ಗುರುವಾರ ಬೆಳಿಗ್ಗೆ 10 ಗಂಟೆಗೆ ಮಕ್ಕಳ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಕವಿಗೋಷ್ಠಿ ಉದ್ಘಾಟಿಸಲಿದ್ದು, ಕಸಾಪ ತಾಲೂಕಾ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನಂದೊಳ್ಳಿ ಗ್ರಾ.ಪಂ.ಅಧ್ಯಕ್ಷೆ ಭವಾನಿ ಸಿದ್ದಿ, ಟಿ.ಎಂ.ಎಸ್ ಉಪಾಧ್ಯಕ್ಷ ನರಸಿಂಹ ಕೋಣೆಮನೆ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿನಾಯಕ ಭಟ್ಟ, ಪತ್ರಕರ್ತ ಜಗದೀಶ ನಾಯಕ, ಪ್ರೌಢ ಶಾಲಾ ಮುಖ್ಯಾಧ್ಯಾಪಕಿ ಗೀತಾ ಹೆಗಡೆ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ ಭಾಗವಹಿಸಲಿದ್ದಾರೆ ಎಂದು ಕಸಾಪ ಅಧ್ಯಕ್ಷ ವಿ.ಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top