Slide
Slide
Slide
previous arrow
next arrow

ನ.11ಕ್ಕೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಕಲೋತ್ಸವ

300x250 AD

ಅಂಕೋಲಾ: 2023 ನೇ ಸಾಲಿನ ಅಂಕೋಲಾ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವು ನ.11 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಹೇಳಿದರು.

ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಜಿ.ಪಂ. ಉತ್ತರಕನ್ನಡ, ಶಾಲಾಶಿಕ್ಷಣ ಇಲಾಖೆ ಉ.ಕ., ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜರುಗುವ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರ ಗೌರವ ಘನ ಉಪಸ್ಥಿತಿ ಇರಲಿದೆ.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳು ಎಸ್. ವೈದ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಗೌರವ ಉಪಸ್ಥಿತಿ ಇರಲಿದ್ದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ಸೈಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉತ್ತರ ಕನ್ನಡ ಲೋಕಸಭಾ ಸಂಸದ ಅನಂತ ಕುಮಾರ ಹೆಗಡೆ, ವಿಧಾನಪರಿಷತ್ ಶಾಸಕ ಎಸ್.ವಿ.ಸಂಕನೂರು, ವಿಧಾನ ಪರಿಷತ್ ಶಾಸಕ ಗಣಪತಿ ಡಿ. ಉಳ್ವೇಕರ, ಪುರಸಭೆಯ ಸದಸ್ಯೆ ಕರುಣಾ ಮಹಾಲೆ, ತಾ.ಪಂ. ಆಡಳಿತಾಧಿಕಾರಿ ನಾಗೇಶ ರಾಯ್ಕರ, ಕುಮಟಾ ಸಹಾಯಕ ಆಯುಕ್ತರು ಮತ್ತು ಪುರಸಭೆ ಆಡಳಿತಾಧಿಕಾರಿ ಕಲ್ಯಾಣಿ ಕಾಂಬಳೆ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಲತಾ ಎಂ ನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಎನ್.ಜಿ.ನಾಯಕ, ತಹಶೀಲ್ದಾರ್ ಬಿ.ಜಿ. ಕುಲಕರ್ಣಿ, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಸುನಿಲ್ ಎಂ. ಅವರು ಉಪಸ್ಥಿತರಿರಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಮನ್ವಯಾಧಿಕಾರಿ ಹರ್ಷಿತಾ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ, ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಹೇಶ ನಾಯಕ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಆರ್‌. ನಾಯಕ, ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಭಾಸ್ಕರ ಗಾಂವಕರ, ಜೈಹಿಂದ್ ಹೈಸ್ಕೂಲ್ ಮುಖ್ಯಾಧ್ಯಾಪಕ ಪ್ರಭಾಕರ ಬಂಟ, ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ನಾಯಕ, ಶಿಕ್ಷಣ ಸಂಯೋಜಕ ಮತ್ತು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಬಿ.ಎಲ್. ನಾಯ್ಕ, ರಚನಾ ನಾಯಕ, ಬೀರಣ್ಣ ನಾಯಕ, ವಿ.ಟಿ.ನಾಯಕ ಉಪಸ್ಥಿತರಿದ್ದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಸ್ವಾಗತಿಸಿದರು. ರಾಜು ನಾಯಕ ವಂದಿಸಿದರು.

300x250 AD

Share This
300x250 AD
300x250 AD
300x250 AD
Back to top