ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಕದಂಬ ಸಹೋದಯ ಶಾಲಾ ಸಂಕೀರ್ಣದ ಆಶ್ರಯದಲ್ಲಿ ನ.9ರಂದು ಶ್ರೀ ಶ್ರೀ ಗಂಗಾಧರೇದ್ರ ಸರಸ್ವತಿ ಸಭಾಭವನ, ಯಲ್ಲಾಪುರದಲ್ಲಿ ಏರ್ಪಡಿಸಲಾಗಿದ್ದ “ಸಾಂಸ್ಕೃತಿಕ ಜಾಥಾ-2023” ಸ್ಪರ್ಧೆಗಳಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಸಾಧನೆ ಗೈದಿದ್ದಾರೆ.
ಸಹಶಿಕ್ಷಕರ ಮಾರ್ಗದರ್ಶನದಲ್ಲಿ ಕುಮಾರಿ ಚಂದನಾ ಹೆಗಡೆ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ವಿದ್ಯಾರ್ಥಿನಿಯರಾದ ಕ್ಷಮಾ ಹೆಗಡೆ, ಸ್ಪೂರ್ತಿ ಹೆಗಡೆ ಹಾಗೂ ನಿವೇದಿತಾ ಹೆಗಡೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ, ಕುಮಾರ್ ಸುದಿತ್ ಬಳಗುಡಿ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಪಡೆದಿದ್ದಾರೆ. ಹಾಗೂ ಸಮೂಹ ಗಾಯನ ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೂ ಸಹ ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.