Slide
Slide
Slide
previous arrow
next arrow

ನ.21ರಿಂದ ಉದ್ಯಮಶೀಲತಾಭಿವೃದ್ಧಿ ಶಿಬಿರ

300x250 AD

ಕಾರವಾರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ, ಸಿಡಾಕ್ ಕಾರವಾರ ಹಾಗೂ ಕ್ರಿಯೇಟಿವ್ ಕಂಪ್ಯೂಟರ್ ಇನಸ್ಟಿಟ್ಯೂಟ್ ಯಲ್ಲಾಪುರ ಸಂಯುಕ್ತ ಆಶ್ರಯದಲ್ಲಿ ನ.21ರಿಂದ 30ರವರೆಗೆ ಎಲ್ಲ ವರ್ಗದ ಪುರುಷ/ ಮಹಿಳೆಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಕ್ರಿಯೇಟಿವ್ ಕಂಪ್ಯೂಟರ್ ಇನಸ್ಟಿಟ್ಯೂಟ್ ಯಲ್ಲಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲರ ಸಾಮರ್ಥ್ಯಗಳನ್ನು ಗುರುತಿಸುವಿಕೆ, ವ್ಯವಸ್ಥಾಪನಾ ಕೌಶಲ್ಯಗಳು, ಹೊಸ ಉದ್ಯಮಗಳ ಸ್ಥಾಪನೆಗೆ ಇರುವ ಅವಕಾಶಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಲೆಕ್ಕ ಪತ್ರಗಳ ನಿರ್ವಹಣೆ, ಮಾರಾಟದ ತಂತ್ರಗಳು, ಸರ್ಕಾರದ ಯೋಜನೆಗಳು, ಬ್ಯಾಂಕಗಳ ಪಾತ್ರ, ಉದ್ಯಮಶೀಲರ ಅನುಭವ ಹಂಚಿಕೆ, ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಈ ಅವಧಿಯಲ್ಲಿ ಒಂದು ದಿನ ಕೈಗಾರಿಕೆಗೆ ಭೇಟಿ ನೀಡಿ ಆ ಕೈಗಾರಿಕೆಗಳ ಮಾಲೀಕರ ಜೊತೆಗೆ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು.

ಆದುದರಿಂದ ಉದ್ಯಮ ಪ್ರಾರಂಭಿಸಲು ಉತ್ಸುಕರಾಗಿರುವ ಎಲ್ಲ ವರ್ಗದ ಪುರುಷ/ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು 18ರಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಶಿಕ್ಷಣ ಹೊಂದಿರಬೇಕು. ಆಸಕ್ತಿಯುಳ್ಳ ಪುರುಷ/ಮಹಿಳೆಯರು ನ.20ರ ರೊಳಗಾಗಿ ಉಪ ನಿರ್ದೇಶಕರು, ಸಿಡಾಕ್, ಶಿರವಾಡ, ಕಾರವಾರ ಇವರಿಗೆ ಅರ್ಜಿ ಸಲ್ಲಿಸಬಹುದು.

300x250 AD

ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ಉಪನಿರ್ದೇಶಕ ಶಿವಾನಂದ ವೆಂ.ಎಲಿಗಾರ (ಮೊ.ಸಂ.:tel:+919448812974), ತರಬೇತುದಾರರಾದ ಶಿವರಾಜಕುಮಾರ ಹೆಳವಿ (ಮೊ.ಸಂ.:tel:+918722708795) ಹಾಗೂ ಪ್ರತಿಭಾ ಆಸೋದೆ (ಮೊ.ಸಂ.:tel:+918105224080) ಅವರನ್ನು ಸಂಪರ್ಕಿಸಬಹುದು ಎಂದು ಸಿಡಾಕ್‌ನ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top