Slide
Slide
Slide
previous arrow
next arrow

ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ: ಗಂಗೂಬಾಯಿ ಮಾನಕರ

300x250 AD

ಕಾರವಾರ: ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ದೀಪಾವಳಿ ವೇಳೆ ಪಟಾಕಿ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಕುರಿತು ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹಸಿರು ಪಟಾಕಿಯನ್ನು ರಾತ್ರಿ 8 ರಿಂದ 10 ಗಂಟೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಶಬ್ದ ಹಾಗೂ ವಾಯುಮಾಲಿನ್ಯ ನಿಯಂತ್ರಣ, ಸಾರ್ವಜನಿಕ ಆಸ್ತಿ, ಆರೋಗ್ಯ ಸಂರಕ್ಷಣೆ ಹಿತದೃಷ್ಟಿಯಿಂದ ಹಸಿರು ಪಟಾಕಿ ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ CSIR (Council of Scientific & Industrial Research ) & NEERI (National Environmental Engineering Research Institute) ಚಿಹ್ನೆ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಿದ್ದು, ಅಂತಹ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಸಾರ್ವಜನಿಕರು ಉಪಯೋಗಿಸಲು ಅವಕಾಶ ಇರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top