Slide
Slide
Slide
previous arrow
next arrow

ಸ್ವಿಮ್ಮಿಂಗ್ ಚಾಂಪಿಯನ್ ಶಿಫ್: ಮೋಹನ್ ನೇತ್ರೇಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಇಲ್ಲಿನ ಸಮೃದ್ಧಿ ನಗರದ ನಿವಾಸಿಯಾದ ಮೊಹನ ಬಿ. ನೇತ್ರೆಕರ್ ನ.4, 5 ರಂದು ಬೆಂಗಳೂರಿನಲ್ಲಿ ನಡೆದ 24ನೇ ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಫ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಗೈದಿದ್ದಾರೆ.

ಅಂತರಾಷ್ಟ್ರೀಯ ಮತ್ತು ರಾಷ್ಟ್ರ, ರಾಜ್ಯಮಟ್ಟದ ಮ್ಯಾರಥಾನ್ ಓಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಮ್ಯಾರಥಾನ್ ಮೋಹನನೆಂದೇ ಹೆಸರಾಗಿರುವ ಮೋಹನ ನೇತ್ರೇಕರ್ 75 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಭಾಗವಹಿಸಿ 100ಮೀ. ಮತ್ತು 50 ಮೀ. ಬ್ಯಾಕ್‌ಸ್ಟ್ರೋಕ್‌ನಲ್ಲಿ ಪ್ರಥಮ ಸ್ಥಾನ ಹಾಗೂ 50 ಮೀ. ಫ್ರೀ ಸ್ಟೈಲ್‌ನಲ್ಲಿ ದ್ವಿತೀಯ ಸ್ಥಾನ ಮತ್ತು 100 ಮೀ. ಫ್ರೀ ಸ್ಟೈಲ್‌ನಲ್ಲಿ ತೃತೀಯ ಸ್ಥಾನ ಪಡೆದು, ನವೆಂಬರ್ 24 ರಿಂದ 26 ರವರೆಗೆ ಮಂಗಳೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

300x250 AD

Share This
300x250 AD
300x250 AD
300x250 AD
Back to top