Slide
Slide
Slide
previous arrow
next arrow

ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ತಾಲೂಕಿನ ಶ್ರೀದೇವಿ ಪ್ರೌಢಶಾಲೆ ಹುಲೆಕಲ್ ನಲ್ಲಿ ನಡೆದ ತಾಲೂಕಾ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಶಿರಸಿ ಲಯನ್ಸ್ ಪ್ರೌಢಶಾಲಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ಗಳಿಸಿದ್ದಾರೆ.

ಭುವನಾ ಹೆಗಡೆ ಭರತನಾಟ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದಿದ್ದಾಳೆ. ಸಿಂಚನಾ ಶೆಟ್ಟಿ ಜಾನಪದ ಗೀತೆಯಲ್ಲಿ ದ್ವಿತೀಯ, ಅನನ್ಯ ಹೆಗಡೆ ಹಾಗೂ ತಂಡ ಸಮೂಹ ಜಾನಪದ ನೃತ್ಯದಲ್ಲಿ ದ್ವಿತೀಯ, ಸೂಫಿಯಾ ಗುಲುಗುಂದಿ ಹಿಂದಿ ಭಾಷಣದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ತಾಲೂಕಾ ಮಟ್ಟದಲ್ಲಿ ವಿಜೇತರಾದ ಎಲ್ಲ ವಿದ್ಯಾರ್ಥಿಗಳಿಗೆ ಶಿರಸಿ ಲಯನ್ಸ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಲಯನ್ ಸಮೂಹ ಶಾಲೆಗಳ ಪ್ರಾಚಾರ‍್ಯರು , ಶಿಕ್ಷಕ-ಶಿಕ್ಷಕೇತರ ವೃಂದ,ಶಿರಸಿ ಲಯನ್ಸ್ ಕ್ಲಬ್ ಬಳಗ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ. ಇವರಿಗೆ ಸಹಕರಿಸಿದ, ಮಾರ್ಗದರ್ಶನ ನೀಡಿದ ಎಲ್ಲಾ ಶಿಕ್ಷಕ ಬಂಧುಗಳಿಗೆ, ಪಾಲಕ ಬಂಧುಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top