Slide
Slide
Slide
previous arrow
next arrow

ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಡಾ.ಮೋಹನ ಪಾಟೀಲ್

300x250 AD

ದಾಂಡೇಲಿ: ನಗರದ ರೋಟರಿ ಶಿಕ್ಷಣ ಸಂಸ್ಥೆಯ ನೂತನ ಸಾಲಿಗೆ ಅಧ್ಯಕ್ಷರಾಗಿ ನಗರದ ಹಿರಿಯ ವೈದ್ಯರು ಹಾಗೂ ರೋಟರಿ ಕ್ಲಬಿನ ಹಿರಿಯ ಸದಸ್ಯರಾಗಿರುವ ಡಾ.ಮೋಹನ ಪಾಟೀಲ್ ಅವರು ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ರೋಟರಿ ಕ್ಲಬ್ಬಿನ ಹಿರಿಯ ಸದಸ್ಯರು ಹಾಗೂ ನಿವೃತ್ತ ಸರಕಾರಿ ಅಭಿಯಂತರರು ಆಗಿರುವ ಲಿಯೋ ಪಿಂಟೋ ಅವರು ಆಯ್ಕೆಯಾಗಿದ್ದಾರೆ. ಡಾ.ಮೋಹನ ಪಾಟೀಲ್ ಅವರು ಈ ಹಿಂದೆಯು ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

300x250 AD

ನಿಕಟಪೂರ್ವ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ರೋಟರಿ ಸಭಾಭವನದಲ್ಲಿ ನಡೆಯಿತು.

Share This
300x250 AD
300x250 AD
300x250 AD
Back to top