ಶಿರಸಿ: ತಾಲೂಕಿನ ಬಿಕ್ನಳ್ಳಿ ಗ್ರಾಮದ ಬಾವಿಯಲ್ಲಿ ಚಿರತೆಯೊಂದು ಬಿದ್ದು ಪ್ರಾಣ ಕಳೆದುಕೊಂಡಿದೆ. ಶಿರಸಿ ವಲಯದ ಉಂಚಳ್ಳಿ ಬಿಕ್ನಳ್ಳಿ ಗ್ರಾಮದ ಸಾರ್ವಜನಿಕ ಕುಡಿಯುವ ನೀರಿನ ಬಾವಿಗೆ ಇದು ಆಹುತಿಯಾಗಿದೆ. ಇದು ಆಹಾರ ಅರಿಸಿ ಜನವಸತಿ ಪ್ರದೇಶಕ್ಕೆ ಬಂದು ಆಯತಪ್ಪಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇದು ಒಂದುವರೆ ವರ್ಷದ ಹೆಣ್ಣು ಚಿರತೆಯಾಗಿದೆ
ಮುಂಜಾನೆ ನಸುಕಿನ ವೇಳೆ ಬಾವಿಗೆ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಡಿಎಫ್ಓ ಅಜ್ಜಯ್ಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರಣ್ಯ ಇಲಾಖಾ ಸಿಬ್ಬಂದಿ ಬಾವಿಯಿಂದ ಚಿರತೆ ಶವ ಮೇಲೆತ್ತಿದ್ದಾರೆ.