Slide
Slide
Slide
previous arrow
next arrow

ನ.17ಕ್ಕೆ ದೇವನಳ್ಳಿಯಲ್ಲಿ ‘ಎಲೆಚುಕ್ಕೆ ರೋಗದ ಬಗ್ಗೆ ಮಾಹಿತಿ-ಜಾಗೃತಿ ಕಾರ್ಯಕ್ರಮ’

300x250 AD

ಶಿರಸಿ: ತಾಲೂಕಿನ ಮತ್ತಿಘಟ್ಟದ ಮುಂಡಗನಮನೆ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಿ. ಮುಂಡಗನಮನೆ ಹಾಗೂ ಬೆಳೆಸಿರಿ ರೈತ ಉತ್ಪಾದಕ ಕಂಪನಿ ಇವರ ಸಂಯುಕ್ತ ಆಶ್ರಯದಲ್ಲಿ ಸಹಕಾರಿ ಸಪ್ತಾಹದ ಅಂಗವಾಗಿ ‘ಎಲೆಚುಕ್ಕೆ ರೋಗದ ಬಗ್ಗೆ ಮಾಹಿತಿ-ಜಾಗೃತಿ ಕಾರ್ಯಕ್ರಮ’ವನ್ನು ನ.17, ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ದೇವನಳ್ಳಿಯ ವೀರಭದ್ರ ದೇವಾಲಯ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಗನಮನೆ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ವಹಿಸಲಿದ್ದು, ಸಹಕಾರ ಸಂಘಗಳ ಸಹಾಯಕ ನಿಬಂಧಕ ಟಿ.ವಿ.ಶ್ರೀನಿವಾಸ್ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಬಿ.ಪಿ.ಸತೀಶ್, ಹಿರಿಯ ಸಹಾಯಕ ನಿರ್ದೇಶಕ ಸತೀಶ್ ಹೆಗಡೆ, ಶಂಕರ ದಿವೇಕರ್, ದೇವನಳ್ಳಿ ಗ್ರಾ.ಪಂ. ಅಧ್ಯಕ್ಷ ನಾಗರಾಜ್ ಮರಾಠಿ ಉಪಸ್ಥಿತರಿರಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಡೆವಲಪ್ಮೆಂಟ್ ಸೊಸೈಟಿ ಕೃಷಿ ಸಲಹೆಗಾರ ವಿ.ಎಂ.ಹೆಗಡೆ ಆಗಮಿಸಲಿದ್ದು, ಸರ್ವರೂ ಆಗಮಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಲು ಸಂಘಟಕರು ವಿನಂತಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top