ಸಿದ್ದಾಪುರ: ಇತ್ತೀಚಿಗೆ ಅನ್ಯ ಕೋಮಿನ ವ್ಯಕ್ತಿಯಿಂದ ಹಲ್ಲೆಗೊಳಗಾದ ಆರ್‌ಎಸ್‌ಎಸ್ ಕಾರ್ಯಕರ್ತ ದಿನೇಶ್ ಪಟೇಲ್ ಅವರ ನಿವಾಸಕ್ಕೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಹಲ್ಲೆಗೆ ಒಳಗಾಗಿದ್ದನ್ನು ಖಂಡಿಸಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಸೇರಿದಂತೆ ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಜರಿದ್ದರು.