ಯಲ್ಲಾಪುರ: ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಸಂಸ್ಕೃತೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ವಿದ್ಯಾರ್ಥಿನಿಯರು ಸಾಧನೆ ಮಾಡಿದ್ದಾರೆ.
ಭಾಷಣ ಸ್ಪರ್ಧೆಯಲ್ಲಿ ಸಿಂಚನಾ ಎಸ್ ಭಟ್ ಹಾಗೂ ಸ್ತೋತ್ರ ಗಾಯನ ಸ್ಪರ್ಧೆಯಲ್ಲಿ ಹರ್ಷಿತಾ ಎಸ್. ಭಟ್ ಪ್ರಥಮ ಸ್ಥಾನ ಪಡೆದಿದ್ದು, ಸ್ತೋತ್ರಗಾಯನ ಸ್ಪರ್ಧೆಯಲ್ಲಿ ಪ್ರಣತಿ ಮೆಣಸುಮನೆ ತೃತೀಯ ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾರೆ.