Slide
Slide
Slide
previous arrow
next arrow

ಅಂಗನವಾಡಿ ಕೇಂದ್ರಗಳೇ ಕನ್ನಡ ಭಾಷೆ ಕಲಿಕೆಗೆ ಭದ್ರ ಅಡಿಪಾಯ: ಗೋಪಾಲಕೃಷ್ಣ ನಾಯಕ

300x250 AD

ಅಂಕೋಲಾ: ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳೇ ಕನ್ನಡ ಭಾಷೆಯ ಕಲಿಕೆಗೆ ಭದ್ರವಾದ ಅಡಿಪಾಯವನ್ನು ಹಾಕಿ ಕೊಡುತ್ತಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಂಕೋಲಾ ತಾಲೂಕು ಘಟಕದ ಅಧ್ಯಕ್ಷ‌ ಗೋಪಾಲಕೃಷ್ಣ ನಾಯಕ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಸೆ ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಅಂಗನವಾಡಿಗಳಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವುದನ್ನು ಹಾಡುವುದನ್ನು ಕಲಿಸಲಾಗುತ್ತದೆ. ಅದರ ಪ್ರಭಾವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಶಾಸ್ತ್ರಿಮಠ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಂಗನವಾಡಿ ಮಕ್ಕಳಿಗಾಗಿ ಕಾರ್ಯಕ್ರಮ ನಡೆಸಿರುವುದು ಶ್ಲಾಘನೀಯ ಇದರಿಂದ ಅಂಗನವಾಡಿ ಕೇಂದ್ರಗಳಿಗೂ ಕನ್ನಡ ಮಾಧ್ಯಮದ ಸರಕಾರಿ ಶಾಲೆಗಳಿಗೂ ಉತ್ತೇಜನ ನೀಡಿದಂತಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದಲೂ ಅಂಗನವಾಡಿ ಮಕ್ಕಳಿಗಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.

300x250 AD

ಮುಖ್ಯ ಅತಿಥಿ ಡಾ.ಕರುಣಾಕರ ಮಾತನಾಡಿದರು. ವೇದಿಕೆಯಲ್ಲಿ ಬಹುಮಾನದ ಪ್ರಾಯೋಜಕರಾದ ಲಯನ್ ಸಂಜಯ ಅರುಂದೇಕರ, ಬೆಳಸೆ ಗ್ರಾ.ಪಂ. ಅಧ್ಯಕ್ಷೆ ಶೋಭಾ ಬೀರಣ್ಣ ನಾಯಕ, ಗಣಪತಿ ಗಾಂವಕರ ಉಪಸ್ಥಿತರಿದ್ದು ಮಾತನಾಡಿದರು. ಕಸಾಪ ಹಿರಿಯ ಸದಸ್ಯ ಮಹಾಂತೇಶ ರೇವಡಿ ಪ್ರಾಸ್ತಾವಿಕ ಮಾತನಾಡಿದರು. ಗೌರವ ಕಾರ್ಯದರ್ಶಿ ಜಗದೀಶ ನಾಯಕ ಹೊಸ್ಕೇರಿ ಸ್ವಾಗತಿಸಿದರು. ಭಾವನಾ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ನಿವೃತ್ತ ಶಿಕ್ಷಕ ರಫೀಕ ಶೇಖ ವಂದಿಸಿದರು. ಕಾರ್ಯಕ್ರಮದ ಪೂರ್ವದಲ್ಲಿ ಅಂಗನವಾಡಿ ಮಕ್ಕಳಿಗಾಗಿ ಕಪ್ಪೆ ಜಿಗಿತ, ಲಿಂಬೂ ಓಟ, ಸಂಗೀತ ಖುರ್ಚಿ ಮುಂತಾದ ಮನರಂಜನಾ ಕ್ರೀಡೆಗಳನ್ನು, ಛದ್ಮವೇಷ, ಏಕ ಪಾತ್ರಾಭಿನಯ, ನೃತ್ಯ, ಹಾಡು ಮುಂತಾದ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು, ಮಕ್ಕಳಿ ಹಾಗೂ ಪಾಲಕರು ಇದ್ದರು.

Share This
300x250 AD
300x250 AD
300x250 AD
Back to top