ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ರಾಜ್ಯಮಟ್ಟದ ಸಂಸ್ಕೃತಿಕೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಏರ್ಪಡಿಸಲಾದ ಭಗವದ್ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ಇಸಳೂರಿನ ಶ್ರೀನಿಕೇತನ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ಪ್ರಣೀತಾ ಪರಂಜಪೆ ಪ್ರಥಮ ಬಹುಮಾನ ಮತ್ತು ಕುಮಾರಿ ದೀಪ್ತಿ ಭಟ್ ತೃತೀಯ ಬಹುಮಾನವನ್ನು, ಭಾಷಣ ಸ್ಪರ್ಧೆಯಲ್ಲಿ 9ನೇ ತರಗತಿಯ ಕುಮಾರಿ ಅನುರಾಧಾ ಹೆಗಡೆ ತೃತೀಯ ಬಹುಮಾನ ಹಾಗೂ ಸ್ತೋತ್ರ ಕಂಠಪಾಠ ಸ್ಪರ್ಧೆಯಲ್ಲಿ 10ನೇ ತರಗತಿಯ ಕುಮಾರ್ ಹರ್ಷಿತ್ ಭಾಗವತ್ ತೃತೀಯ ಬಹುಮಾನವನ್ನು ಪಡೆದಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಶಾಲೆಯ ಸಂಗೀತ ಶಿಕ್ಷಕಿ ಶ್ರೀಮತಿ ಸುಪ್ರಿಯಾ ಹೆಗಡೆ ಮಾರ್ಗದರ್ಶನ ನೀಡಿದ್ದಾರೆ.
ಅದೇ ದಿನದಂದು, ಶಿರಸಿಯ ಶ್ರೀ ಮಾರಿಕಾಂಬಾ ಸ್ವಿಮ್ಮಿಂಗ್ ಕ್ಲಬ್ನ ಆಶ್ರಯದಲ್ಲಿ ಏರ್ಪಡಿಸಲಾದ ಪ್ರಪ್ರಥಮ ತಾಲೂಕಾ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ ಶ್ರೀನಿಕೇತನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಿರಿ ಹೆಗಡೆ 25ಮೀ. ಮತ್ತು 50ಮೀ. ವಿಭಾಗದಲ್ಲಿ ದ್ವಿತೀಯ ಬಹುಮಾನವನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.