Slide
Slide
Slide
previous arrow
next arrow

ತಾಲೂಕಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಲಯನ್ಸ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ ಉತ್ತರಕನ್ನಡ ಹಾಗೂ ಮಿಯಾರ್ಡ್ಸ್ ಚಂದನ ಪದವಿಪೂರ್ವ ಕಾಲೇಜು ಶಿರಸಿ (ಉ.ಕ) ಇವರ ಸಹಯೋಗದಲ್ಲಿ ನ.22ರಂದು ನಡೆದ ಶಿರಸಿ ತಾಲೂಕು ಮಟ್ಟದ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಡಾ.ಭಾಸ್ಕರ್ ಸ್ವಾದಿ ಮೇಮೊರಿಯಲ್ ಲಯನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆ ಗೈದಿದ್ದಾರೆ.

ಕುಮಾರಿ ಚಿನ್ಮಯಿ ಜಿ. ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಾರಿ ಅಯನಾ ವೈ. ಭಕ್ತಿಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದು, ವಿದ್ಯಾರ್ಥಿನಿಯರ ಈ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಲಯನ್ಸ್ ಕ್ಲಬ್ ಬಳಗ, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top