Slide
Slide
Slide
previous arrow
next arrow

ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

300x250 AD

ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿನೂತನವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ವೇದಿಕೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿಯಾದ ಎಮ್.ಎಸ್ ಹೆಗಡೆ ಗುಣವಂತೆ ಮತ್ತು ಮುಖ್ಯ ಶಿಕ್ಷಕಿಯಾದ ಶ್ರೀಮತಿ ವೈಲೆಟ್ ಫರ್ನಾಂಡಿಸ್ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರೀತಮ್ ನಾಯ್ಕ, ನಿಧಿ ಗೌಡ, ವಿಂಧ್ಯಾ ಹೆಗಡೆ, ಕಲಾಧರ ಮಡಿವಾಳ ಮತ್ತೀತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ವಿಂದ್ಯಾ ಹೆಗಡೆ ವಹಿಸಿದ್ದಳು.

300x250 AD

ಶಾಲೆಯ ಶಿಕ್ಷಕ/ಶಿಕ್ಷಕಿಯರಿಂದ ಮಕ್ಕಳನ್ನು ರಂಜಿಸಲು ಗಾಯನ, ನಾಟಕ ಇನ್ನು ಅನೇಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಅಶ್ವಿನಿ ಮೇಸ್ತ ಸ್ವಾಗತಿಸಿದರು. ಶ್ರೀಮತಿ ಪ್ರತಿಮಾ ಹೆಗಡೆ ನಿರೂಪಿಸಿದರು. ಶ್ರೀಮತಿ ವನಿತಾ ನೊರೊನ್ಹಾ ವಂದಿಸಿದರು.

Share This
300x250 AD
300x250 AD
300x250 AD
Back to top