ಶಿರಸಿ:ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ”ವನ್ನು ನ.26,ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿ೦ದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯರಾದ ಡಾ|| ಎಸ್.ಸಿ.ಕುಲಕರ್ಣಿ ಪಾಲ್ಗೊಂಡು ಸಲಹೆ, ಚಿಕಿತ್ಸೆ ನೀಡಲಿದ್ದಾರೆ. ಕಾರಣ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಎಂದು ಸಂಸ್ಥೆಯ ಅಧ್ಯಕ್ಷರಾದ ಸುಧೀರ ಭಟ್ ಹಾಗೂ ಕಾರ್ಯದರ್ಶಿಗಳಾದ ಅನಂತ ಹೆಗಡೆ ಆಶೀಸರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.26ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ
