Slide
Slide
Slide
previous arrow
next arrow

ಬನವಾಸಿ ಕಾಲೇಜಿನಲ್ಲಿ ಕಲಾ,ವಾಣಿಜ್ಯ, ವಿಜ್ಞಾನ ವಸ್ತು ಪ್ರದರ್ಶನ

300x250 AD

ಬನವಾಸಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿಲಾಗಿದ್ದ ಕಲಾ,ವಾಣಿಜ್ಯ,ವಿಜ್ಞಾನ ವಿಷಯಗಳ ವಸ್ತು ಪ್ರದರ್ಶನ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳು ವಿವಿಧ ವಿಷಯದ ನೂರಕ್ಕೂ ಹೆಚ್ಚು ಮಾದರಿಗಳನ್ನು ಪ್ರದರ್ಶಿಸಿ ಅವುಗಳ ವಿವರ ಮತ್ತು ಪ್ರಾಮುಖ್ಯತೆಗಳನ್ನು ವಿವರಿಸಿದರು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಿದ್ದಲಿಂಗಪ್ಪ ಟಿ. ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿರುವ ವಿವಿಧ ಬಗೆಯ ಕೌಶಲಗಳನ್ನು ವ್ಯಕ್ತಪಡಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಪಠ್ಯ ಚಟುವಟಿಕೆಗಳೊಂದಿಗೆ ಸಹಪಠ್ಯ ಚಟುವಟಿಕೆಗಳು ಕೂಡ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಕಾರಣವಾಗುತ್ತವೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಯಡಳ್ಳಿ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಟಿ. ಭಟ್ ಮಾತನಾಡಿ, ಬನವಾಸಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಪರಿಶ್ರಮದಿಂದ ಉತ್ತಮವಾದ ವಸ್ತು ಪ್ರದರ್ಶನ ಏರ್ಪಟ್ಟಿದೆ ಎಂದು ಪ್ರಶಂಶಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಪ್ರಕಾಶ ಬಂಗ್ಲೆ ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಶ್ಲಾಘಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಂ.ಕೆ. ನಾಯ್ಕ ಹೊಸಳ್ಳಿ ಅವರು ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಗೆ ವಸ್ತು ಪ್ರದರ್ಶನವೆಂಬುದು ಒಂದು ವೇದಿಕೆಯಾಗಿದೆ ಎಂದು ನುಡಿದರು.

300x250 AD

ಡಾ.ಆರ್.ಟಿ.ಭಟ್ಟರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ಬನವಾಸಿಯ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಸ್ತು ಪ್ರದರ್ಶನ ವೀಕ್ಷಿಸಿದರು. ವಿದ್ಯಾರ್ಥಿನಿಯರಾದ ರಕ್ಷಿತಾ ಹಂಚಿನಮನೆ, ನಿವೇದಿತಾ ನಾಯ್ಕ, ನವ್ಯಾ ನಾಯ್ಕ ಪ್ರಾರ್ಥನೆ ಹಾಡಿದರು. ಉಪನ್ಯಾಸಕರಾದ ಪ್ರಭಾವತಿ ಹೆಗಡೆ ಸ್ವಾಗತಿಸಿದರು. ಎ.ಆರ್. ಪ್ರಕಾಶ ವಂದಿಸಿದರು. ತನುಜಾ ನಾಯ್ಕ ನಿರೂಪಿಸಿದರು.

Share This
300x250 AD
300x250 AD
300x250 AD
Back to top