Slide
Slide
Slide
previous arrow
next arrow

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಥಾ

300x250 AD

ಮುಂಡಗೋಡ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024ರ ಕುರಿತು ತಾಲ್ಲೂಕಾ ಸ್ವೀಪ್ ಸಮಿತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.

ಜಾಥಾಕ್ಕೆ ತಹಶೀಲ್ದಾರ ಶಂಕರ ಗೌಡಿ ಚಾಲನೆ ನೀಡಿದರು. ಪಟ್ಟಣದ ಪ್ರವಾಸ ಮಂದಿರದಿAದ ಆರಂಭವಾದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಗೃತಿ ಜಾಥಾ ಶಿವಾಜಿ ಸರ್ಕಲ್ ಮೂಲಕ ಪಟ್ಟಣದ ಹಲವು ಬಿದಿಗಳಲ್ಲಿ ಜಾಥಾ ಸಂಚರಿಸಿತು. ಜಾಥಾದಲ್ಲಿ ಪ್ರಥಮ ದರ್ಜೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

300x250 AD

ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಪ್ರಾಂಶುಪಾಲರಾದ ಪ್ರಸನ್ನಸಿಂಗ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಶೇಖರ ಬಿ., ಶ್ರೀಧರ ಗಿರಡ್ಡಿ, ಜಿಲ್ಲಾ ಪಂಚಾಯತಿ ಎಂಜಿನಿಯರ್ ಪ್ರಧಿಕ ಭಟ್, ತಾಲೂಕು ಪಂಚಾಯತ ಅಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಮ್ಯಾನೇಜರ್ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top