Slide
Slide
Slide
previous arrow
next arrow

ಕೊನೆಗೌಡರಿಗೆ ಉಚಿತ 10 ಲಕ್ಷ ರೂ.ಗಳ ಇನ್ಶುರೆನ್ಸ್ ಸೌಲಭ್ಯ, ಸನ್ಮಾನ-ಔತಣಕೂಟ: ಅನಂತಮೂರ್ತಿ ಹೆಗಡೆ

300x250 AD

ಶಿರಸಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನಂತಮೂರ್ತಿ ಹೆಗಡೆ ಹಲವಾರು ಸಾಮಾಜಿಕ ಕಾರ್ಯ, ಶಾಲೆಗಳಿಗೆ, ಬಸ್ ಸ್ಟ್ಯಾಂಡ್, ಅಸ್ಪತ್ರೆ ಗಳಿಗೆ ಶುದ್ಧ ಕುಡಿಯುವ ನೀರು ಘಟಕ, ಜಿಲ್ಲೆ ರಿಕ್ಷಾ ಚಾಲಕರಿಗೆ ಸಮವಸ್ತ್ರ ಪಾಸಿಂಗ್ ಯೋಜನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ – ಮೆಡಿಕಲ್ ಕಾಲೇಜು ಸಲುವಾಗಿ ಹೋರಾಟದಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆ ಮಾತಾಗಿರುವ ಅನಂತಮೂರ್ತಿ ಹೆಗಡೆ ಇದೀಗ ಜಿಲ್ಲೆಯ ಜೀವನಾಡಿಯಾಗಿರುವ ಅಡಿಕೆ ತೋಟದ ಅಡಿಕೆ ಕೊನೆಗೌಡರ ಸೇವೆ ಹೊಸ ಯೋಜನೆ ಪ್ರಾರಂಭಿಸುತ್ತಿದ್ದಾರೆ.

ಅಡಿಕೆಯು ಬೆಳೆ ನಮ್ಮ ಜಿಲ್ಲೆಯ ಜೀವನಾಡಿ. ಕೊನೆಗೌಡರು ಕೊನೆ ಕೊಯ್ಯುವಾಗ, ಮದ್ದನ್ನು ಸಿಂಪಡಿಸುವಾಗ, ಮರದಿಂದ ಬಿದ್ದು ಪ್ರಾಣಕಳೆದುಕೊಳ್ಳುತ್ತಿರುವ ಪ್ರಸಂಗಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಹಾಗಾಗಿ ಇಂಥಾ ಸೇವಕರ ರಕ್ಷಣೆಗೆ ನಿಲ್ಲುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಅನಾಹುತವನ್ನು ತಡೆಯುವುದು ಅಸಾಧ್ಯವಾದರೂ, ಅದರ ಪರಿಣಾಮವನ್ನು ಸಾಧ್ಯವಾದಷ್ಟು ಸಹ್ಯ ಮಾಡುವುದು ನನ್ನ ಉದ್ದೇಶ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ, ಅನಂತಮೂರ್ತಿ ಹೆಗಡೆ ಟ್ರಸ್ಟ್ ವತಿಯಿಂದ, ‘ಇಂಡಿಯನ್ ಪೋಸ್ಟ್ ಆಫೀಸ್’ ನ ಯೋಜನೆಯಾದ “ಗ್ರೂಪ್ ಆಕ್ಸಿಡೆಂಟ್ ಗಾರ್ಡ್ ಪಾಲಿಸಿ”ಯನ್ನು ಎಲ್ಲ ಕೊನೆಗೌಡರಿಗೂ ಮಾಡಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿದ್ದೇನೆ. ಈ ಆಕ್ಸಿಡೆಂಟ್ ಗಾರ್ಡ್ ಪಾಲಿಸಿಯು, ಅಪಘಾತದಿಂದ ಮರಣ /ಶಾಶ್ವತ ಅಂಗವೈಕಲ್ಯ /ಭಾಗಶಃ ಅಂಗವೈಕಲ್ಯಕ್ಕೆ 10,00,000 ರೂಪಾಯಿಗಳ ಕವರೇಜ್ ಹೊಂದಿದೆ. ಮತ್ತು ಈ ಪಾಲಿಸಿಯಡಿಯಲ್ಲಿ ರೂ 60,000 ವರೆಗೆ ಒಳರೋಗಿ ವೆಚ್ಚ, ರೂ 30,000 ವರೆಗೆ ಹೊರರೋಗಿ ವೆಚ್ಚ, 10 ದಿನಗಳವರೆಗೆ ರೂ 1,000 ದೈನಂದಿನ ಆಸ್ಪತ್ರೆ ನಗದು ನೆರವು, ಮೃತರ 2 ಮಕ್ಕಳಿಗೆ 1 ಲಕ್ಷ ರೂಪಾಯಿ ಶೈಕ್ಷಣಿಕ ನೆರವು, ರೂ 25,000 ವರೆಗೆ ಕುಟುಂಬ ಸಾರಿಗೆ ಪ್ರಯೋಜನ ಮತ್ತು ರೂ. 5,000 ವರೆಗೆ ಅಂತಿಮ ಸಂಸ್ಕಾರದ ನೆರವಿನ ಸೌಲಭ್ಯವನ್ನು ಹೊಂದಿದೆ. ಜಿಲ್ಲೆಯಾದ್ಯಂತ ಎಲ್ಲ ಕೊನೆಗೌಡರಿಗೆ ಈ ಪಾಲಿಸಿಯನ್ನು ಮಾಡಿಸುವ ಸಂಕಲ್ಪ ಮಾಡಿದ್ದೇನೆ.

300x250 AD

ನಮ್ಮ ಸಂಸ್ಥೆಯ, ಜಿಲ್ಲೆಯ ಎಲ್ಲ ಸಹಕಾರಿ ಸೇವಾ ಸಂಘ ಮತ್ತು ಪಂಚಾಯತಿಗಳಿಗೆ ತಲುಪಿ, ಸ್ಥಳೀಯ ಕೊನೆಗೌಡರ ವಿವರಗಳನ್ನು ಸಂಗ್ರಹಿಸಿ ಕೊಡುವಂತೆ ಮನವಿಯನ್ನು ಸಲ್ಲಿಸುತ್ತದೆ. ಜಿಲ್ಲೆಯ ಅಡಿಕೆ ತೋಟದ ಮಾಲೀಕರು, ನಿಮ್ಮ ಮನೆಗೆ ಬರುವ ಕೊನೆಗೌಡರಿಗೆ ಈ ಸೌಲಭ್ಯದ ವಿಚಾರವನ್ನು ತಿಳಿಸಿ, ಅವರ ವಿವರಗಳನ್ನು ಸ್ಥಳೀಯ ಪಂಚಾಯತಿ ಅಥವಾ ಸೇವಾಸಹಕಾರಿ ಸಂಘಕ್ಕೆ ತಲುಪಿಸಬೇಕಾಗಿ ಮನವಿ ಮಾಡುತ್ತಿದ್ದೇನೆ. ನಂತರ ನಮ್ಮ ಸಂಸ್ಥೆಯ ಸಿಬ್ಬಂದಿ ಮತ್ತು ಪೋಸ್ಟ್ ಆಫೀಸ್ ಸಿಬ್ಬಂದಿಗಳು ಅಲ್ಲಿಗೆ ಬಂದು, ಸಂಗ್ರಹಿಸಿದ ವಿವರಗಳನ್ನು ಸ್ವೀಕರಿಸಿ, ಪಾಲಿಸಿಯನ್ನು ಮಾಡಿಸುತ್ತಾರೆ. ಪಾಲಿಸಿ ಬಾಂಡ್ ಬಂದ ನಂತರ, ಎಲ್ಲ ಕೊನೆಗೌಡರಿಗೆ, ಔತಣಕೂಟ ಏರ್ಪಡಿಸಿ, ಗೌರವಿಸಿ, ಪಾಲಿಸಿ ಬಾಂಡನ್ನು ಹಸ್ತಾಂತರಿಸುತ್ತೇವೆ. ಮತ್ತು ದಶಕಗಳಿಂದ ಸೇವೆ ಸಲ್ಲಿಸಿರುವ, ಹಿರಿಯ ಕೊನೆಗೌಡರನ್ನು ಗುರುತಿಸಿ, ಅವರ ಜೀವಮಾನದ ಸಾಧನೆಗಾಗಿ, ಸನ್ಮಾನ ಕಾರ್ಯಕ್ರಮವನ್ನೂ ನಡೆಸಲಿದ್ದೇವೆ ಎಂದು ಅನಂತಮೂರ್ತಿ ಹೆಗಡೆ ಪ್ರಕಟಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ +9187623 27713 / +919448317709 / +919449995439 / +919482306468 ಸಂಪರ್ಕಿಸಲು ಕೋರಿದೆ.

Share This
300x250 AD
300x250 AD
300x250 AD
Back to top