Slide
Slide
Slide
previous arrow
next arrow

ನ.25,26ಕ್ಕೆ ಸಮಗಾರ ಹರಳಯ್ಯ ಸಂಘದ ಸದಸ್ಯರಿಗೆ ಅಭಿನಂದನಾ ಸಮಾರಂಭ

300x250 AD

ಸಿದ್ದಾಪುರ: ಇತ್ತೀಚಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸಮಗಾರ (ಚಮ್ಮಾರ) ಹರಳಯ್ಯ ಸಂಘದ ಚುನಾಯಿತ ಸದಸ್ಯರಿಗೆ ಅಭಿನಂದನಾ ಸಮಾರಂಭ ಹಾಗೂ ಸದಸ್ಯತ್ವ ಅಭಿಯಾನವು ಕಾರವಾರ ಹಾಗೂ ಶಿರಸಿಯಲ್ಲಿ ನಡೆಯಲಿದೆ.

ಕಾರವಾರದಲ್ಲಿ ನಡೆಯಲಿರುವ ಕಾರ್ಯಕ್ರಮವು ನ.25 ರಂದು ಇಲ್ಲಿನ ಜಿಲ್ಲಾ ರಂಗಮಂದಿರದಲ್ಲಿ ಹಾಗೂ ಶಿರಸಿಯಲ್ಲಿ ನ.26 ರಂದು ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಈ ವೇಳೆ ಶ್ರೀ ಸಂತ ರವಿದಾಸ ಸಮಾಜ ಹಾಗೂ ಸಮಾಜದ ಇನ್ನಿತರ ಸಂಘಟನೆಗಳ ಮೂಲಕ ಸಂವಿಧಾನ ದಿನಾಚರಣೆ, ಅಭಿನಂದನಾ ಸಮಾರಂಭ, ಹಾಗೂ ಸದಸ್ಯತ್ವ ಅಭಿಯಾನ ನಡೆಯಲಿದ್ದು ಉತ್ತರ ಕನ್ನಡ ಜಿಲ್ಲೆಯ ಸಮಾಜದ ಬಂಧುಗಳು ಈ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವವನ್ನು ಪಡೆದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಾಜ್ಯ ಸಮಗಾರ (ಚಮ್ಮಾರ) ಹರಳಯ್ಯ ಸಂಘದ ಸದಸ್ಯ ಹಾಗೂ ಪಟ್ಟಣ ಪಂಚಾಯತ ಸದಸ್ಯ ನಂದನ ಬೋರಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top