ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಜೂಜಾಟವನ್ನು ನಿಷೇಧಿಸಲು ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸುವ ನೂತನ ನಿಯಮಗಳನ್ನು ಯಾರಾದರೂ ಉಲ್ಲಂಘನೆ ಮಾಡಿದಲ್ಲಿ, ಅವರು ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. ಹಾಗೆಯೇ ಅವರನ್ನು ಬಂಧಿಸುವ ಸಾಧ್ಯತೆ ಇರುವುದಾಗಿಯೂ ಸರ್ಕಾರ ಹೇಳಿದೆ. ಕಳೆದ ಶನಿವಾರ ನಡೆದ ಸಂಪುಟ ಸಭೆಯಲ್ಲಿ ಆನ್ಲೈನ್ ಜೂಜು ನಿಷೇಧ ಸಂಬಂಧ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಕರ್ನಾಟಕ ಪೆÇಲೀಸ್ ಕಾಯ್ದೆ 1963 ಗೆ ತಿದ್ದುಪಡಿ ಮಾಡುವ ಮೂಲಕ ಆನ್ಲೈನ್ ಮೂಲಕ ನಡೆಯುವ ಜೂಜಾಟವನ್ನು ನಿಷೇಧ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಮೊಬೈಲ್, ಕಂಪ್ಯೂಟರ್ ಮೊದಲಾದ ಎಲೆಕ್ಟ್ರಾನಿಕ್ ವಸ್ತುಗಳ ಮೂಲಕ ನಡೆಯುವ ಜೂಜಾಟಗಳನ್ನು ನಿಲ್ಲಿಸುವ ಸಲುವಾಗಿ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.
ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಕಾಯ್ದೆ ತಿದ್ದುಪಡಿ ಮಂಡನೆಯಾಗಲಿದೆ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆನ್ಲೈನ್ ಗೇಮ್‍ಗಳ ನಿಷೇಧಕ್ಕೆ ಸರ್ಕಾರ ಮುಂದಾಗಿರುವುದಾಗಿ ಸಚಿವ ಮಾಧುಸ್ವಾಮಿ ಅವರು ತಿಳಿಸಿದ್ದಾರೆ. ಸಂಪುಟ ಈ ತಿದ್ದುಪಡಿಯನ್ನು ಈಗಾಗಲೇ ಅನುಮೋದಿಸಿದೆ. ಶೀಘ್ರದಲ್ಲೇ ಈ ತಿದ್ದುಪಡಿಯನ್ನು ವಿಧಾನಸಭೆಯ ಮುಂದಿಡಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.
ನ್ಯೂಸ್ 13