ಶಿರಸಿ: ನಿಲೇಕಣಿ ಪ್ರೌಢಶಾಲೆ ಡಯೆಟ್ ಹಾಲ್‌ನಲ್ಲಿ ಏರ್ಪಡಿಸಿದ ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್ ಮತ್ತು ಭಾರತ ಸೇವಾದಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ನಡೆಸಲಾಯಿತು.
ತಾಲೂಕಾ ಆರೋಗ್ಯಾಧಿಕಾರಿ ಡಾ. ವಿನಾಯಕ ಭಟ್ಟ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಇಸಿಒ ಪ್ರಸನ್ನ ಹೆಗಡೆ, ತಾಲೂಕಾ ಕಾರ್ಯದರ್ಶಿ ಎನ್.ಎಸ್.ಭಾಗ್ವತ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ತಾಲೂಕಾ ಆರೋಗ್ಯಾಧಿಕಾರಿ ಆರೋಗ್ಯ ಇಲಾಖೆಯ ಪ್ರತಿಯೊಂದು ಕಾರ್ಯಕ್ರಮ ಹಾಗೂ ಯೋಜನೆಗಳು ಮಾಹಿತಿ, ಅನಿಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಹಾಗೂ ಎನ್‌ಎಸ್‌ವಿ ಪಾಕ್ಷಿಕ ಕುರಿತು ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಒಂದಕ್ಕೊ0ದು ಚೈನ್ ಇದ್ದಂತೆ. ಹಾಗಾಗಿ ಆರೋಗ್ಯ ಇಲಾಖೆ ಕಾರ್ಯಕ್ರಮ ಹಾಗೂ ಅವರು ನೀಡುವ ಮಾಹಿತಿಯ ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೌರಿ ಸಿ. ನಾಯ್ಕ, ಮಹಾಲಕ್ಷ್ಮಿ ಹೆಗಡೆ, ಮಹಾಲಕ್ಷ್ಮಿ ನಾಯ್ಕ ಹಾಜರಿದ್ದು, ಮಾಹಿತಿ ನೀಡಿದರು.