Slide
Slide
Slide
previous arrow
next arrow

ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಅತ್ಯಂತ ಪರಿಣಾಮಕಾರಿ ; ಶಾಸಕ ಭೀಮಣ್ಣ ನಾಯ್ಕ

300x250 AD

ಶಿರಸಿ: ಶಿಕ್ಷಣದ ಜೊತೆಗೆ ಕ್ರೀಡೆಯೂ ಸಹ ಮಹತ್ವಾದ್ದಾಗಿದೆ. ನಮ್ಮ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಅತ್ಯಂತ ಪರಿಣಾಮಕಾರಿ. ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮತೋಲನ ಇದ್ದರೆ ಮಾತ್ರ ಜೀವನದ ಎಲ್ಲಾ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಅವರು ಶನಿವಾರ ನಗರದ ಅರಣ್ಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಸ್ಕೊಡ್ವೆಸ್ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿದರು. ತನ್ನ ಸಿಬ್ಬಂದಿಗಳ ಸಾಮರ್ಥ್ಯ ವೃದ್ಧಿಗಾಗಿ ಸ್ಕೋಡ್ವೆಸ್ ಈ ರೀತಿಯ ಕ್ರೀಡಾಕೂಟ ನಡೆಸುವುದು ಶ್ಲಾಘನೀಯ. ಜೊತೆಗೆ ಸ್ಕೋಡವೆಸ್ ಸಂಸ್ಥೆ ತನ್ನ ರಚನಾತ್ಮಕ ಕಾರ್ಯದ ಮೂಲಕ ದೇಶಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿ ಎಂದರು.

ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ವಾಸುದೇವ ಮಾತನಾಡಿ, ಸ್ಕೋಡ್ವೆಸ್ ಸಂಸ್ಥೆಯ ಕಾರ್ಯವೈಖರಿಯನ್ನು ಹಲವು ವರ್ಷದಿಂದ ಆತ್ಮೀಯವಾಗಿ ಗಮನಿಸುತ್ತಿದ್ದೇನೆ. ಮಹಿಳಾ ಸಬಲೀಕರಣ, ಸ್ವಯಂ ಉದ್ಯೋಗ, ಕೃಷಿ, ಪರಿಸರ ಸಂರಕ್ಷಣೆ, ಬುಡಕಟ್ಟು ಜನಾಂಗದ ಅಭಿವೃದ್ಧಿ ಸೇರಿದಂತೆ ಹಲವಾರು ಕ್ಷೇತ್ರದಲ್ಲಿ ಕಳೆದ 18 ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದೆ. ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ಕ್ರೀಯಾಶೀಲ ಕೆಲಸದಿಂದ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಸಂಸ್ಥೆಯ ಎಲ್ಲ ಕೆಲಸಗಳಿಗೆ ಅವರು ಶುಭ ಕೋರುವುದಾಗಿ ಹೇಳಿದರು.

300x250 AD

ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ. ಕೂರ್ಸೆ, ನಿರ್ದೇಶಕರಾದ ದಯಾನಂದ ಅಗಾಸೆ, ಕೆ.ಎನ್.ಹೊಸ್ಮನಿ, ವಸಂತ ಹಾದಿಮನಿ ಕಾರ್ಯದರ್ಶಿ ಸರಸ್ವತಿ ಎನ್., ರವಿ ಇದ್ದರು. ಕ್ರೀಡಾಕೂಟದಲ್ಲಿ ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ 22 ಜಿಲ್ಲೆಯ ಸ್ಕೊಡ್ವೆಸ್ ಸಿಬ್ಬಂದಿಗಳು ಹಾಜರಿದ್ದರು.

ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿ, ವಂದಿಸಿದರು. ಸಂಸ್ಥೆಯ ಕಾರ್ಯಕ್ರಮಾಧಿಕಾರಿ ರಿಯಾಜ್ ಸಾಗರ, ಎಫಿಓ ಕಾರ್ಯಕ್ರಮ ಯೋಜನಾಧಿಕಾರಿ ಪ್ರಶಾಂತ ನಾಯ್ಕ ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಇದ್ದರು. ಕ್ರೀಡಾ ಕೂಟದಲ್ಲಿ ಕ್ರಿಕೆಟ್, ಹಗ್ಗಜಗ್ಗಾಟ, ಕಬಡ್ಡಿ, ಲಗೋರಿ, ವಾಲಿಬಾಲ್ ಸೇರಿ ಹಲವಾರು ಕ್ರೀಡೆಗಳು ನಡೆದವು.

Share This
300x250 AD
300x250 AD
300x250 AD
Back to top