ಯಲ್ಲಾಪುರ: ಯಲ್ಲಾಪುರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರೀನ್ ಕೇರ್ (ರಿ.) ಶಿರಸಿ, ಐ.ಎಂ.ಎ. ಲೈಫ್ ಲೈನ್ ಬ್ಲಡ್ ಬ್ಯಾಂಕ್ ಪಂಡಿತ್ ಸಾರ್ವಜನಿಕ ಆಸ್ಪತ್ರೆ ಶಿರಸಿ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಯಲ್ಲಾಪುರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ರಕ್ತ ಶೇಖರಣ ಘಟಕ ತಾಲೂಕು ಆಸ್ಪತ್ರೆ ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿಆಶ್ರಯದಲ್ಲಿ ನ.28ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು, ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿಗಳಾದ ಜಿತೇಂದ್ರ ಕುಮಾರ್ ತೋನ್ಸೆ, ಮಾತನಾಡಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿ ಯುವಕರಲ್ಲಿ ರಕ್ತದಾನ ಮಾಡುವಂತೆ ಪ್ರೇರೇಪಿಸಿದರು. ತಾಲೂಕಾ ಆಸ್ಪತ್ರೆಯ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಸ್.ಟಿ.ಭಟ್ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಮಾತನಾಡಿ ನಮ್ಮ ಸಂಸ್ಥೆಯಲ್ಲಿ 18 ವರ್ಷ ತುಂಬಿದ ವಿದ್ಯಾರ್ಥಿಗಳು ಮೊದಲ ಬಾರಿಗೆ ರಕ್ತದಾನ ಮಾಡುತ್ತಿರುವುದು ನಮಗೆ ತುಂಬಾ ಹೆಮ್ಮೆ ಅನಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಗ್ರೀನ್ ಕೇರ್ ಸಂಸ್ಥೆಯ ನಿರ್ದೇಶಕರು ಮತ್ತು ಲೈಫ್ ಲೈನ್ ಲ್ಯಾಬೋರೇಟರಿ ಯಲ್ಲಾಪುರದ ಮಾಲಕರಾದ ಶ್ರೀಮತಿ ಆಶಾ ಡಿಸೋಜಾ, ಯಲ್ಲಾಪುರ ಆಸ್ಪತ್ರೆಯ ವೈದ್ಯರಾದ ಡಾ॥ ನೇಮಣ್ಣ, ತಾಲೂಕಾ ಆಸ್ಪತ್ರೆಯ ಕಾರ್ಯಕ್ರಮ ವ್ಯವಸ್ಥಾಪಕರಾದ ಎಸ್. ಎಸ್. ಪಾಟೀಲ್, ಜೆ.ಕೆ. ಎಂಟರ್ಪ್ರೈಸಸ್ ಶಿರಸಿಯ ವ್ಯವಸ್ಥಾಪಕರಾದ ಮಹಾಂತೇಶ ಪ್ರಭುದೇವ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 23 ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಎಸ್.ಟಿ. ಭಟ್ ಕಾರ್ಯಕ್ರಮ ನಿರೂಪಿಸಿದರು, ತಾಲೂಕಾ ಆಸ್ಪತ್ರೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಹೇಶ್ ತಾಳಿಕೋಟೆ ಎಲ್ಲರಿಗೂ ವಂದಿಸಿದರು.