ಅಂಕೋಲಾ: ತಾಲೂಕಿನ ಕಣಗಿಲ ಮೂಲದ ಹಾಲಿ ವಂದಿಗೆಯ ನಿವಾಸಿ ನಿವೃತ್ತ ಪ್ರಾಂಶುಪಾಲ ಎಚ್.ಎಲ್.ನಾಯಕ (72) ನಿಧನರಾಗಿದ್ದಾರೆ.
ಮೃತರು ತನ್ನ ಸೇವಾವಧಿಯಲ್ಲಿ ಅತ್ಯುತ್ತಮವಾದ ಕಾರ್ಯನಿರ್ವಹಿಸಿ, ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದರು. ನಿವೃತ್ತಿಯ ನಂತರವೂ ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಉಡುಪಿ ಜಿಲ್ಲೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, ಕುಮಾಟಾದ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಸಾಹಿತಿ ಹೊನ್ನಮ್ಮ ನಾಯಕರ ಪತಿ. ಇವರು ಪತ್ನಿ ಹೊನ್ನಮ್ಮ ನಾಯಕ, ಈರ್ವರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ತಾಲೂಕು ಹಾಗೂ ಜಿಲ್ಲೆಯ ಹಲವು ಗಣ್ಯರು ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ