Slide
Slide
Slide
previous arrow
next arrow

ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ವರ್ಗಾಯಿಸುವಂತೆ ಆಗ್ರಹ : ಮನವಿ ಸಲ್ಲಿಕೆ

300x250 AD

ಭಟ್ಕಳ: ತಾಲೂಕಿನ ತಹಸೀಲ್ದಾರ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ಒಂದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ತಕ್ಷಣ ಇಂತಹ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಬೇರೆ ತಾಲೂಕಿಗೆ, ಇಲ್ಲವೇ ಬೇರೆ ಜಿಲ್ಲೆಗೆ ವರ್ಗಾವಣೆಗೊಳಿಸಿ ಸಾಮಾಜಿಕ ನ್ಯಾಯ ಒದಗಿಸುವಂತೆ ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಸಹಾಯಕ ಆಯುಕ್ತರ ಮೂಲಕ‌ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರ ಕಚೇರಿಯಲ್ಲಿ ಹಲವು ವರ್ಷಗಳ ಕಾಲ ಸಿಬ್ಬಂದಿಗಳು ಒಂದೇ ಸ್ಥಳದಲ್ಲಿ ಕೆಲಸ ಮಾಡುವುದರಿಂದ ಇಲಾಖೆಯ ಘನತೆ ಗೌರವ ಹಾಳಾಗುತ್ತಿದೆ ಮತ್ತು ಇಂತಹ ಸಿಬ್ಬಂದಿಗಳಿಂದ ಸಾರ್ವಜನಿಕರ ಕೆಲಸವೂ ಸಹ ಆಗುವುದಿಲ್ಲ. ಇಲ್ಲಿರುವ ಸಿಬ್ಬಂದಿಗಳು ಸಾರ್ವಜನಿಕರ ಕೆಲಸ ಮಾಡುವುದಕ್ಕಿಂತ ದಲ್ಲಾಳಿಗಳ ಕೆಲಸಕ್ಕೆ ಸೀಮಿತವಾದಂತಿದೆ. ಇಲ್ಲಿರುವ ಸಿಬ್ಬಂದಿಗಳ ವರ್ಗಾವಣೆಯು ಸಹಾಯಕ ಆಯುಕ್ತರ ಕಚೇರಿಯಿಂದ ತಹಶೀಲ್ದಾರ ಕಚೇರಿಗೆ ತಹಶೀಲ್ದಾರ ಕಚೇರಿಯಿಂದ ಸಹಾಯಕ ಆಯುಕ್ತರ ಕಚೇರಿಗೆ ಮಾತ್ರ ಸೀಮಿತವಾಗಿದೆ. ಅಲ್ಲದೇ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗದೇ ನಿಯಮಾವಳಿಯನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ಸುತ್ತೋಲೆ ವಿರುದ್ಧವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೇವಲ ಆಡಳಿತದಲ್ಲಿ ಪಾರದರ್ಶಕತೆ ತರಲು ತಹಶೀಲ್ದಾರರನ್ನು ಮಾತ್ರ ವರ್ಗಾವಣೆ ಮಾಡಿದ್ದರೆ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತಂದುಕೊಳ್ಳುವುದು ಕಷ್ಟದ ಸಂಗತಿ. ಇದರಿಂದ ಇನ್ನಿತರ ಅಧಿಕಾರಿಗಳಾದ ಎಂ. ವಿಜಯಲಕ್ಷ್ಮಿ ಮಣಿ ಇವರು ಭಟ್ಕಳ ಸಹಾಯಕ ಆಯುಕ್ತರ ಮತ್ತು ತಹಶೀಲ್ದಾರ ಕಚೇರಿಯಲ್ಲಿ ಒಟ್ಟಾರೆಯಾಗಿ 12 ವರ್ಷಗಳ ಕಾಲ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ರಜನಿ ಜಿ. ದೇವಾಡಿಗ ಇವರು ಭಟ್ಕಳ ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ 10 ವರ್ಷಗಳ ಕಾಲ ನಿರಂತರವಾಗಿ ಒಂದೇ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡಿದ್ದು, ಈಗ ಮುಂಬಡ್ತಿ ಹೊಂದಿ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿಯೇ ಉಪ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶ್ವನಾಥ ಕರಡೆ 13 ವರ್ಷಗಳಿಂದ ತಹಶೀಲ್ದಾರ ಕಚೇರಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಇಂತಹ ಕೆಲವು ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಭಟ್ಕಳ ತಾಲೂಕಿಗೆ ಮಾತ್ರ ಸೀಮಿತವಾಗಿದ್ದು, ಇದರಿಂದ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಸರಕಾರವೇ ಪ್ರೋತ್ಸಾಹ ನೀಡಿದಂತಾಗುತ್ತದೆ. ಆದ್ದರಿಂದ 3 ವರ್ಷಕ್ಕಿಂತ ಮೇಲ್ಪಟ್ಟು ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು 1 ತಿಂಗಳೊಳಗಾಗಿ ವರ್ಗಾವಣೆ ಮಾಡಿ, ಸರ್ಕಾರ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿದರು.

300x250 AD

ಒಂದು ವೇಳೆ ವರ್ಗಾವಣೆ ಮಾಡದೇ ಇದ್ದಲ್ಲಿ ಅನಿವಾರ್ಯವಾಗಿ ಸಹಾಯಕ ಆಯುಕ್ತರ ಕಚೇರಿ ಮುಂದೆ ಸಂವಿಧಾನವು ಸಾರ್ವಜನಿಕರಿಗೆ ನೀಡಿರುವ ಮೂಲಭೂತ ಹಕ್ಕು ಮತ್ತು ಮೂಲಭೂತ ಕರ್ತವ್ಯಗಳಂತೆ ಅನಿರ್ದಿಷ್ಟ ಅವಧಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮನವಿಯನ್ನು ಸಹಾಯಕ ಆಯುಕ್ತರ ಅನುಪಸ್ಥಿತಿಯಲ್ಲಿ ತಹಸೀಲ್ದಾರ ತಿಪ್ಪೇಸ್ವಾಮಿ ಸ್ವೀಕರಿಸಿದರು.ಈ‌ ಸಂದರ್ಭದಲ್ಲಿ ಭಟ್ಕಳ ತಾಲೂಕ ಘಟಕದ ಅಧ್ಯಕ್ಷ ನಾಗೇಂದ್ರ ನಾಯ್ಕ, ಉಪಾಧ್ಯಕ್ಷ ಶಂಕರ ನಾಯ್ಕ, ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ, ಸಹ ಕಾರ್ಯದರ್ಶಿ ವಸಂತ ದೇವಾಡಿಗ ಸೇರಿದಂತೆ ಹಲವರಿದ್ದರು

Share This
300x250 AD
300x250 AD
300x250 AD
Back to top