Slide
Slide
Slide
previous arrow
next arrow

ಮೂರು ರಾಜ್ಯದಲ್ಲಿ ಬಿಜೆಪಿಗೆ ಜಯ : ಯಲ್ಲಾಪುರದಲ್ಲಿ ಸಂಭ್ರಮಾಚರಣೆ

300x250 AD

ಯಲ್ಲಾಪುರ: ಉತ್ತರ ಭಾರತದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಅಂಬೇಡ್ಕರ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ದೇಶ, ರಾಜ್ಯಗಳ ಅಭಿವೃದ್ಧಿಗೆ ಮೋದಿ ನೇತೃತ್ವವೇ ಅವಶ್ಯಕ ಎಂಬುದನ್ನು ಈ‌ ಫಲಿತಾಂಶ ಸಾಬೀತುಪಡಿಸಿದೆ. ಲೋಕಸಭಾ ಚುನಾವಣೆಯಲ್ಲೂ ಜನತೆ ಬಿಜೆಪಿಯನ್ನೇ ಬೆಂಬಲಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿ, ಉತ್ತರ ಭಾರತದ ಜನತೆ ಬಿಜೆಪಿಯನ್ನು ಗೆಲ್ಲಿಸಿ, ಅಭಿವೃದ್ಧಿ ಪರ್ವಕ್ಕೆ ಬೆಂಬಲ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಈ ಫಲಿತಾಂಶ ಮುನ್ಸೂಚನೆಯಾಗಿದ್ದು, ಕಾಂಗ್ರೆಸ್ ಹಾಗೂ ಇತರೆ ವಿರೋಧಿ ಪಕ್ಷಗಳು ಅಸ್ತಿತ್ವಕ್ಕಾಗಿ ತಡಕಾಡುವ ಸ್ಥಿತಿ ಬರಲಿದೆ ಎಂದರು.

300x250 AD

ತಾಲೂಕಾ ಬಿಜೆಪಿ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ, ಪ್ರಮುಖರಾದ ಉಮೇಶ ಭಾಗ್ವತ, ಶ್ಯಾಮಿಲಿ ಪಾಟಣಕರ್, ಶ್ರೀನಿವಾಸ ಗಾಂವ್ಕರ, ಗಜಾನನ ನಾಯ್ಕ, ಕಲ್ಪನಾ ನಾಯ್ಕ, ರಾಮಚಂದ್ರ ಚಿಕ್ಯಾನಮನೆ ಇತರರಿದ್ದರು.

Share This
300x250 AD
300x250 AD
300x250 AD
Back to top