Slide
Slide
Slide
previous arrow
next arrow

ಸರಸ್ವತಿ ಪ.ಪೂ ಕಾಲೇಜಿನಲ್ಲಿ ಯಶಸ್ವಿಯಾಗಿ ಜರುಗಿದ ವಾರ್ಷಿಕ ಕ್ರೀಡಾಕೂಟ

300x250 AD

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ.ಕೆ.ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅತ್ಯವಶ್ಯಕವಾಗಿದೆ. ಇತ್ತೀಚಿನ ದಿನಗಳಲ್ಲಿ ಪಠ್ಯಕ್ರಮಕ್ಕೆ ನೀಡುವ ಮಹತ್ವ ಪಠ್ಯೇತರ ಚಟುವಟಿಕೆಗಳಿಗೆ ನೀಡುತ್ತಿಲ್ಲದಿರುವುದು ವಿಷಾದದ ಸಂಗತಿಯಾಗಿದೆ. ಆದರೆ ಸರಸ್ವತಿ ಪಿಯು ಕಾಲೇಜಿನವರು ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಹಿರಿಯ ವಾಲಿಬಾಲ್‌ ಕ್ರೀಡಾಪಟು ಹಾಗೂ ಸಂಸ್ಥೆಯ ವಿಶ್ವಸ್ಥ ರಮೇಶ ಪ್ರಭು ತಿಳಿಸಿದರು.

ಅಥ್ಲೆಟಿಕ್ಸ್, ವಾಲಿಬಾಲ್, ಥ್ರೋಬಾಲ್, ಬ್ಯಾಡ್ಮಿಂಟನ್, ಚೆಸ್, ಕೆರಮ್ ಮುಂತಾದ ಕ್ರೀಡಾಸ್ಪರ್ಧೆಯಲ್ಲಿ ಕಾಲೇಜಿನ‌ ವಿದ್ಯಾರ್ಥಿಗಳು ಬಹಳ ಹುಮ್ಮಸ್ಸಿನಿಂದ ಭಾಗವಹಿಸಿದರು.

300x250 AD

ಈ ಸಂದರ್ಭದಲ್ಲಿ ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಚಾರ್ಯ ಕಿರಣ ಭಟ್ಟ, ಉಪಪ್ರಾಂಶುಪಾಲೆ ಸುಜಾತಾ ಹೆಗಡೆ, ಕ್ರೀಡಾ ಸಂಯೋಜಕ ಪದ್ಮನಾಭ ಪ್ರಭು, ಉಪನ್ಯಾಸಕ ವೃಂದದವರು ಹಾಗೂ ನಿರ್ಣಾಯಕರಾದ ದಿವಾಕರ, ಸುಮಂಗಲಾ, ಜಯರಾಜ ನಾಗಾರಾಜ ಮೊದಲಾದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top